ಬಾಗೇಪಲ್ಲಿ ಗಡಿಯ ವೀರಯೋಧ ಮುರುಳಿ ನಾಯಕ್ ಹುತಾತ್ಮ: ಬೆಂಗಳೂರು ಏರ್ಪೋರ್ಟ್‌ಗೆ ಬಂದ ಪಾರ್ಥಿವ ಶರೀರ

Date:

ಬಾಗೇಪಲ್ಲಿ ಗಡಿಯ ವೀರಯೋಧ ಮುರುಳಿ ನಾಯಕ್ ಹುತಾತ್ಮ: ಬೆಂಗಳೂರು ಏರ್ಪೋರ್ಟ್‌ಗೆ ಬಂದ ಪಾರ್ಥಿವ ಶರೀರ

ಬೆಂಗಳೂರು: ದಿನದಿಂದ ದಿನಕ್ಕೆ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಲೇ ಇದೆ. ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಶೆಲ್ ದಾಳಿಯಿಂದ ಭಾರತದ ಯುವ ಸೈನಿಕನೊಬ್ಬ ಪ್ರಾಣ ತ್ಯಾಗ ಮಾಡಿದ್ದಾರೆ. ಮುರುಳಿಯ ಮೃತದೇಹವನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಂದು ನಂತರ ಆಂಬುಲೆನ್ಸ್ ಮೂಲಕ ಯುವಕನ ಸ್ವಗ್ರಾಮಕ್ಕೆ ರವಾನಿಸಲಾಗಿದೆ.
ಜಮ್ಮುವಿನಲ್ಲಿ ಹುತಾತ್ಮನಾಗಿದ್ದ ವೀರ ಯೋಧ ಮುರುಳಿ ನಾಯಕ್ ಪಾರ್ಥಿವ ಶರೀರ ಏರ್ ಪೋರ್ಟ್‌ಗೆ ಆಗಮಿಸಿದೆ. ದೇವನಹಳ್ಳಿ ಏರ್ ಪೋರ್ಟ್ ಇಂಡಿಗೋ ವಿಮಾನ ಲ್ಯಾಂಡ್ ಆಗಿದೆ. ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್ ನಿಂದ ವೀರ ಯೋಧ ಮುರುಳಿ ನಾಯಕ್ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ. ಆರ್ಮಿ ಆಂಬುಲೆನ್ಸ್ ವಾಹನದಲ್ಲಿ ಯೋಧನ ಹುಟ್ಟೂರು ಆಂದ್ರಪ್ರದೇಶಕ್ಕೆ ಶರೀರ ರವಾನೆ ಮಾಡಲಾಗುತ್ತಿದೆ.
ಪಾಕ್ ದಾಳಿಯಲ್ಲಿ ಆಂಧ್ರಪ್ರದೇಶ ಮೂಲದ ಯೋದ ಹುತಾತ್ಮನ ಮೃತ ಶರೀರವನ್ನು ಮೊದಲು ಜಮ್ಮು ಮೂಲಕ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಅಲ್ಲಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರವಾನಿಸಲಾಗಿದೆ. ದೆಹಲಿಯಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿನ ಏರ್ಪೋರ್ಟ್‌ಗೆ ಬಂದ ಯೋಧನ ಶರೀರವನ್ನು ಕಾರ್ಗೋ ಟರ್ಮಿನಲ್‌ನಲ್ಲಿ ಇರಿಸಿ ಭಾರತೀಯ ಯೋಧರಿಂದ ಅಂತಿಮ ನಮನ ಸಲ್ಲಿಕೆ ಮಾಡಲಾಗಿದೆ.
ಇಲ್ಲಿಂದ ಚಿಕ್ಕಬಳ್ಳಾಪುರದ ಮೂಲಕ ಮುರುಳಿ ಅವರ ಮೃತದೇಹವನ್ನು ರಸ್ತೆ ಮಾರ್ಗವಾಗಿ ಸ್ವಗ್ರಾಮ ಗೋರಂಟ್ಲಾಗೆ ರವಾನೆ ಮಾಡಲಾಗುತ್ತಿದೆ. ಇನ್ನು ಆಂಧ್ರ ಪ್ರದೇಶ ಸರ್ಕಾರದಿಂದ ಯೋಧನ ಮೃತದೇಶ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಕಾನೂನು ವಿಧಿ-ವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಲು ಸಿದ್ಧತೆಯನ್ನು ಮಾಡಿಕೊಂಡಿದೆ.

Share post:

Subscribe

spot_imgspot_img

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ

ರೆಡ್ ವೈನ್ ಕುಡಿಯುವುದು ನಿಜವಾಗಿಯೂ ಹೃದಯಕ್ಕೆ ಒಳ್ಳೆಯದೇ? ಇಲ್ಲಿದೆ ಮಾಹಿತಿ ರೆಡ್ ವೈನ್‌...

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...