ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

Date:

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬೆಂಗಳೂರು: ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ಪಾಸ್ಪೋರ್ಟ್ ಪರಿಶೀಲನೆ ಪ್ರಕ್ರಿಯೆಗೆ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ.
ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದಂತೆ, ಪಾಸ್ಪೋರ್ಟ್ ವೆರಿಫಿಕೇಶನ್ ವೇಳೆ ಬಾಡಿ ವೋರ್ನ್ ಕ್ಯಾಮೆರಾ ಧರಿಸುವುದು ಕಡ್ಡಾಯವಾಗಿದೆ. ಪಾಸ್ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸಬಾರದು. ಬದಲಾಗಿ, ಅಧಿಕಾರಿಗಳು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹಿಸಬೇಕು.
ಅರ್ಜಿದಾರರ ಮನೆಗೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮೊದಲು ಎಸ್ಎಂಎಸ್ ಅಥವಾ ಕರೆ ಮೂಲಕ ಮಾಹಿತಿ ನೀಡಬೇಕು. ಅರ್ಜಿದಾರರಿಂದ ಯಾವುದೇ ರೀತಿಯ ಆಮಿಷ ಅಥವಾ ಲಂಚ ನಿರೀಕ್ಷಿಸಬಾರದು. ಲಂಚದ ಉದ್ದೇಶದಿಂದ ಕಿರುಕುಳ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಅರ್ಜಿದಾರರನ್ನು ವಿನಾಕಾರಣ ಅಲೆದಾಡಿಸುವುದು ಅಥವಾ ವರದಿ ನೀಡಲು ವಿಳಂಬ ಮಾಡಬಾರದು. ಪ್ರತಿಕೂಲ ವರದಿ ಸಲ್ಲಿಸುವ ಸಂದರ್ಭಗಳಲ್ಲಿ ಅಧಿಕಾರಿಗಳು ಸೂಕ್ತ ಹಾಗೂ ಸ್ಪಷ್ಟ ಪುರಾವೆಗಳನ್ನು ಹೊಂದಿರಬೇಕು ಎಂದು ಸೂಚಿಸಲಾಗಿದೆ.
ಈ ನಿಯಮಗಳ ಪಾಲನೆ ಕುರಿತು ಡಿಸಿಪಿಗಳು ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ ದಾವಣಗೆರೆ: ದಿವಂಗತ ಶಾಮನೂರು...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...