ಬಾಬರ್ ಅಜಮ್ ಮಾಡಿರುವ ಈ ದಾಖಲೆಯನ್ನು ಧೋನಿ 2008ರಲ್ಲೇ ಮಾಡಿದ್ರು

Date:

ಜಿಂಬಾಬ್ವೆ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿಯೂ ಪಾಕಿಸ್ತಾನ ಇನ್ನಿಂಗ್ಸ್ ಹಾಗೂ 147 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಪಾಕಿಸ್ತಾನ ತಂಡ ಜಿಂಬಾಬ್ವೆ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆಲುವು ಸಾಧಿಸಿದೆ. ಈ ಗೆಲುವಿನ ಮೂಲಕ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಆರಂಭಿಕ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ನಾಲ್ಕೂ ಪಂದ್ಯಗಳನ್ನು ಗೆದ್ದ ಮೊದಲ ಪಾಕಿಸ್ತಾನ ನಾಯಕ ಎಂಬ ದಾಖಲೆಯನ್ನು ಅಜಮ್ ಮಾಡಿದ್ದಾರೆ. ಜಿಂಬಾಬ್ವೆ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಗೆಲ್ಲುವುದಕ್ಕೂ ಮುನ್ನ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನು ಗೆದ್ದಿತ್ತು.

 

ಬಾಬರ್ ಅಜಮ್ ಮಾಡಿರುವ ಈ ದಾಖಲೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಆರಂಭವಾದ ಬೆನ್ನಲ್ಲೇ ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಈ ದಾಖಲೆಯನ್ನು 2008ರಲ್ಲೇ ನಿರ್ಮಿಸಿದ್ದ ವಿಷಯ ಕೂಡ ವೈರಲ್ ಆಗಿದೆ. 2008ರಲ್ಲಿ ಮಹೇಂದ್ರ ಸಿಂಗ್ ಧೋನಿ ಟೀಂ ಇಂಡಿಯಾದ ಟೆಸ್ಟ್ ತಂಡಕ್ಕೆ ನಾಯಕನಾಗಿ ಆಯ್ಕೆಯಾಗುತ್ತಾರೆ. ಹೀಗೆ ಟೆಸ್ಟ್ ನಾಯಕನಾಗಿ ಆಯ್ಕೆಯಾಗಿ ಆಡಿದ ಮೊದಲ ನಾಲ್ಕು ಪಂದ್ಯಗಳಲ್ಲಿ ನಾಲ್ಕೂ ಪಂದ್ಯಗಳನ್ನು ಗೆದ್ದಿದ್ದರು ಮಹೇಂದ್ರ ಸಿಂಗ್ ಧೋನಿ. ಈ ಸತತ 4 ಟೆಸ್ಟ್ ಪಂದ್ಯಗಳ ಗೆಲುವಿನ ಮೂಲಕ ಮಹೇಂದ್ರ ಸಿಂಗ್ ಧೋನಿ 2008ರಲ್ಲಿಯೇ ಹೊಸದೊಂದು ದಾಖಲೆಯನ್ನು ಬರೆದಿದ್ದರು.

 

 

ಹೌದು ನಾಯಕನಾಗಿ ಆಡಿದ ಮೊದಲ 4 ಟೆಸ್ಟ್ ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸಿದ ಏಷ್ಯಾದ ಮೊದಲ ನಾಯಕ ಎಂಬ ದಾಖಲೆಯನ್ನು ಧೋನಿ ಬರೆದಿದ್ದರು. ಹಾಗೂ ಮಹೇಂದ್ರ ಸಿಂಗ್ ಧೋನಿ ನಾಯಕನಾಗಿ ಆಡಿದ ಮೊದಲ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಸತತವಾಗಿ ಜಯ ಸಾಧಿಸಿದ ವಿಶ್ವದ ಏಳನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ಬಾಬರ್ ಅಜಮ್ ನಾಯಕನಾಗಿ ಆಡಿದ ಮೊದಲ 4 ಟೆಸ್ಟ್ ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸಿದ ಏಷ್ಯಾದ ಎರಡನೇ ನಾಯಕ ಎನಿಸಿಕೊಂಡಿದ್ದಾರೆ. ಹಾಗೂ 1890ರಲ್ಲಿ ಇಂಗ್ಲೆಂಡ್‌ನ ವಿಲಿಯಮ್ ಗಿಲ್ಬರ್ಟ್ ಗ್ರೇಸ್ ಎಂಬ ಆಟಗಾರ ನಾಯಕನಾಗಿ ಆಡಿದ ಮೊದಲ 4 ಟೆಸ್ಟ್ ಪಂದ್ಯಗಳಲ್ಲಿ ಸತತವಾಗಿ ಗೆಲುವು ಸಾಧಿಸುವ ಮೂಲಕ ವಿಶ್ವ ಕ್ರಿಕೆಟ್‍ನಲ್ಲಿ ಈ ದಾಖಲೆ ಬರೆದ ಮೊದಲ ನಾಯಕ ಎನಿಸಿಕೊಂಡಿದ್ದಾರೆ.

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...