No menu items!
23.4 C
Munich
Saturday, May 2, 2026

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಮಧ್ಯರಾತ್ರಿ ಚಾಕುವಿನಿಂದ ಹಲ್ಲೆ- ಮೂವರು ಅರೆಸ್ಟ್

Must read

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಮಧ್ಯರಾತ್ರಿ ಚಾಕುವಿನಿಂದ ಹಲ್ಲೆ- ಮೂವರು ಅರೆಸ್ಟ್

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಬಾಂದ್ರಾ ನಿವಾಸದಲ್ಲಿ ಈ ದಾಳಿ ನಡೆದಿದ್ದು, ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.‌
ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದ ಆರೋಪದಲ್ಲಿ ಮೂವರು ಶಂಕಿತರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇನ್ನೂ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.
ನಡೆದಿದ್ದೇನು..
ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ಇಂದು ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಸದ್ಯ ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ.
ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article