No menu items!
17.9 C
Munich
Wednesday, May 6, 2026

ಬಾಲ್ಕನಿಯಿಂದ ಆಯತಪ್ಪಿ ಬಿದ್ದು ಟೆಕ್ಕಿ ಸಾವು..!

Must read

ಬೆಂಗಳೂರು: ಸಿಗರೇಟ್ ಸೇದುವ ವೇಳೆ ಬಾಲ್ಕನಿಯಿಂದ ಆಯತಪ್ಪಿ ಬಿದ್ದು ಟೆಕ್ಕಿ ಸಾವನ್ನಪ್ಪಿರುವ ಘಟನೆ ಕೆ ಆರ್ ಪುರಂ ಅಯ್ಯಪ್ಪನಗರದ ಕೊಡಿಗೇಹಳ್ಳಿಯಲ್ಲಿ ನಡೆದಿದೆ. ಮೃತನನ್ನು ದಿಪಾಂಶು ಶರ್ಮಾ ಎಂದು ಗುರುತಿಸಲಾಗಿದೆ.

ಈ ಘಟನೆ ಶುಕ್ರವಾರ ಬೆಳಗ್ಗೆ 6.45ರ ಸುಮಾರಿಗೆ ಬೆಂಗಳೂರಿನ ಕೆಆರ್ ಪುರ ಬಳಿಯ ಕೊಡಿಗೇಹಳ್ಳಿಯಲ್ಲಿ ನಡೆದಿದ್ದು,
ದಿಪಾಂಶು ಶರ್ಮಾ ತನ್ನ ಸ್ನೇಹಿತರ ಜೊತೆಗೆ ಪಾರ್ಟಿ ಮಾಡುತ್ತಿದ್ದ. ಇದೇ ಸಂದರ್ಭಲ್ಲಿ ಸಿಗರೇಟ್ ಸೇದಲೆಂದು ಟೆಕ್ಕಿ ಬಾಲ್ಕನಿಗೆ ತೆರಳಿದ್ದನು. ಈ ವೇಳೆ ಆಯತಪ್ಪಿ ಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -spot_img

More articles

- Advertisement -spot_img

Latest article