ಬಿಎಸ್‍ವೈ ಸ್ವಿಟ್ಜ್‍ಲ್ಯಾಂಡ್‍ನ ಡಾವೋಸ್‍ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದು, ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
ಕಡೆ ಪಕ್ಷ ಮುಂದಿನವಾರವಾದರೂ ಸಂಪುಟ ವಿಸ್ತರಣೆಗೆ ಅವಕಾಶ ನೀಡುವಂತೆ ಅಮಿತ್ ಷಾಗೆ ಬಿಎಸ್‍ವೈ ಮನವಿ ಮಾಡಿಕೊಂಡರು. ಇದಕ್ಕೆ ಅವರ ಕೂಡ ಸಮ್ಮತಿ ನೀಡಿದ್ದು, ಸರ್ಕಾರ ಮತ್ತು ಪಕ್ಷದ ನಡುವೆ ಗೊಂದಲ ಇಲ್ಲದಂತೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.
ಇನ್ನು ಸಂಜೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ಅಮಿತ್ ಷಾ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ, ಪುನಾರಚನೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ವೇಳೆ ಎಲ್ಲರ ಅಭಿಪ್ರಾಯವನ್ನು ಪರಿಗಣಿಸಿ ಸಂಪುಟ ವಿಸ್ತರಣೆಗೆ ಅನುಮತಿ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.