ಬಿಕಾಂ ಪದವೀಧರರಿಗೆ ಉದ್ಯೋಗಾವಕಾಶ

0
59

ಬೀದರ್ ಜಿಲ್ಲೆಯಲ್ಲಿ administrative assistant ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 24/9/2021 ಕೊನೆಯ ದಿನವಾಗಿದೆ.

ಬೀದರ್ ಜಿಲ್ಲಾ ಪಂಚಾಯಿತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೊಜನೆಯಡಿ ಖಾಲಿ ಇರುವ administrative assistant ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ 8. ಅರ್ಜಿಗಳನ್ನು ಸಲ್ಲಿಸುವವರು ಬಿ.ಕಾಂ ವಿಷಯದಲ್ಲಿ ಕನಿಷ್ಠ ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಕನ್ನಡ ಮತ್ತು ಇಂಗ್ಲೀಶ್ ಟೈಪಿಂಗ್ ಪರಿಣಿತಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. ಎಂಎಸ್ ವರ್ಡ್, ಎಕ್ಸೆಲ್, ಪವರ್ ಪಾಯಿಂಟ್ ಬಗ್ಗೆ ಜ್ಞಾನ ಹೊಂದಿರಬೇಕು.

 

ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 40 ವರ್ಷಗಳನ್ನು ಮೀರಿರಬಾರದು. ಈ ಹುದ್ದೆ ಸಂಪೂರ್ಣ ತಾತ್ಕಾಲಿಕವಾಗಿದ್ದು. 11 ತಿಂಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನಂತರ ಕಾರ್ಯ ಕ್ಷಮತೆ ಪರಿಶೀಲನೆ ಮಾಡಿ ಅಗತ್ಯವಿದ್ದರೆ ನವೀಕರಿಸಲಾಗುತ್ತದೆ. ಕಾರ್ಮಿಕ ಇಲಾಖೆಯ ತಾಲೂಕು ಮಟ್ಟದಲ್ಲಿ ಡೆಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ಮಾಸಿಕ ಸಂಭಾವನೆಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿಯನ್ನು ದೂರ ಶಿಕ್ಷಣದ ಮೂಲಕ ಪಡೆದಿದ್ದರೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನೇಮಕಾತಿಯಾದ ಬಳಿಕ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ನೇಮಿಸಿದ ಸ್ಥಳದಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ಸೆಪ್ಟೆಂಬರ್ 6ರಿಂದ 24ರ ತನಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಬೀದರ್ ಜಿಲ್ಲಾ ಪಂಚಾಯಿತಿಯ ನರೇಗಾ ಶಾಖೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರ ಒಳಗೆ (ರಜೆ ದಿನಗಳನ್ನು ಹೊರತುಪಡಿಸಿ) ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08482-233117 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

 

 

LEAVE A REPLY

Please enter your comment!
Please enter your name here