ಬಿಕ್ಲು ಶಿವ ಕೊಲೆ ಪ್ರಕರಣ: ಆರೋಪಿ ಜಗದೀಶ್ ಅರೆಸ್ಟ್
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹೌದು ದೆಹಲಿ ವಿಮಾನ ನಿಲ್ದಾಣದಲ್ಲಿ ರೌಡಿ ಜಗ್ಗನನ್ನು ಸಿಐಡಿ ಪೊಲೀಸರು ಬಂಧಿಸಿದ್ದು, ಆತನನ್ನು ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಇದುವರೆಗೂ 21 ಮಂದಿ ಆರೋಪಿಗಳನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಬಿಜೆಪಿ ಶಾಸಕ ಬೈರತಿ ಬಸವರಾಜ್ ಕೂಡ ಎ5 ಆರೋಪಿಯಾಗಿದ್ದಾರೆ.
ಜಗ್ಗ ವಿದೇಶಕ್ಕೆ ಪರಾರಿಯಾಗಿರುವ ಶಂಕೆಯಲ್ಲಿ ಆತನ ಸುಳಿವಿಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ಜಗ್ಗ ದುಬೈಗೆ ಪರಾರಿಯಾಗಿದ್ದ ಎನ್ನಲಾಗಿತ್ತು. ಬಳಿಕ ಅಲ್ಲಿಂದ ಥೈಲ್ಯಾಂಡ್ ಗೆ ಪರಾರಿಯಾಗಿದ್ದ. ಬಳಿಕ ಆತ ಭಾರತಕ್ಕೆ ಬರುತ್ತಿದ್ದಾನೆ ಎಂಬ ಮಾಹಿತಿ ಹಿನ್ನಲೆ ಸಿಐಡಿ ತಂಡ ಆತನ ಚಲನವಲನ ಮ್ಯಾನಿಟರ್ ಮಾಡುತ್ತಿತ್ತು. ದೆಹಲಿ ಏರ್ಪೋರ್ಟ್ ನಲ್ಲಿ ಬಂಧಿಸಿ ಟ್ರಾನ್ಸಿಸ್ಟ್ ವಾರೆಂಟ್ ಪಡೆದು ಬೆಂಗಳೂರಿಗೆ ಕರೆತರಲಾಗುತ್ತಿದೆ.