ಬಿಕ್ಲು ಶಿವ ಕೊಲೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್!
ಬೆಂಗಳೂರು: ಬಿಕ್ಲು ಶಿವ ಎನ್ನಲಾದ ರೌಡಿಶೀಟರ್ ಶಿವಪ್ರಕಾಶ್ ಅವರ ಹತ್ಯೆ ಪ್ರಕರಣ ಸಂಬಂಧ ಭಾರತಿನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಅನಿಲ್, ಅರುಣ್ ಹಾಗೂ ನವೀನ್ ಎಂದು ಗುರುತಿಸಲಾಗಿದ್ದು,
ಈತನಲ್ಲಿ ಅರುಣ್ ಮತ್ತು ನವೀನ್ ಇಬ್ಬರೂ ಪ್ರಕರಣದ ಎ1 ಆರೋಪಿ ಜಗದೀಶನ ಆಪ್ತರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆ ಬಳಿಕ ಇಬ್ಬರೂ ಪರಾರಿಯಾಗಿದ್ದರು. ಇದೀಗ ಪೊಲೀಸರು ಮೂವರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಜುಲೈ 15ರಂದು ರಾತ್ರಿ, ಹಲಸೂರು ನಿವಾಸದ ಎದುರು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಿಕ್ಲು ಶಿವ ಎಂಬ ಶಿವಪ್ರಕಾಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.
ಶಿವಪ್ರಕಾಶ್ ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತೊಡಗಿದ್ದವರು ಎಂಬ ಮಾಹಿತಿ ಲಭ್ಯವಾಗಿದೆ.