ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿ

Date:

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿಬೆಂಗಳೂರು: ಭಾರತೀನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ‘ಬಿಕ್ಲು ಶಿವ’ ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ರಿಮ್ಯಾಂಡ್ ಅರ್ಜಿ ಸಲ್ಲಿಸಲಾಗಿದ್ದು, ಕಸ್ಟಡಿ ಅಗತ್ಯವಿರುವ ಬಗ್ಗೆ ಒಂಬತ್ತು ಪ್ರಮುಖ ಕಾರಣಗಳನ್ನು ಉಲ್ಲೇಖಿಸಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.ಈ ಹಿಂದೆ ಭಾರತೀನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದಾಗ ಬೈರತಿ ಬಸವರಾಜ್ ಅವರು ಕೆಲವು ಸತ್ಯಾಂಶಗಳನ್ನು ಮರೆಮಾಚಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಸ್ಟಡಿ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಿಐಡಿ ಉಲ್ಲೇಖಿಸಿದ ಪ್ರಮುಖ ಕಾರಣಗಳು:ತನಿಖೆಯಲ್ಲಿ ದೊರೆತ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಕೂಲಂಕಷ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳುವುದು.ಹತ್ಯೆಗೆ ಮುನ್ನ ಆರೋಪಿಯ ಚಲನವಲನಗಳ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸುವುದು.ಬಂಧನದ ವೇಳೆ ಬಳಸುತ್ತಿದ್ದ ಮೊಬೈಲ್ ಫೋನ್‌ಗಳು ಪತ್ತೆಯಾಗಿಲ್ಲ; ಅವುಗಳನ್ನು ವಶಕ್ಕೆ ಪಡೆಯುವುದು.ಸಾಕ್ಷಿದಾರರ ಹೇಳಿಕೆಗಳೊಂದಿಗೆ ಆರೋಪಿಯ ಹೇಳಿಕೆಗಳನ್ನು ಹೋಲಿಕೆ ಮಾಡಿ ಪರಿಶೀಲಿಸುವುದು.ಆರೋಪಿಯ ಮನೆ ಹಾಗೂ ಗೃಹ ಕಚೇರಿಯಲ್ಲಿ ಶೋಧ ನಡೆಸಿ ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸುವುದು.ಇತರ ಆರೋಪಿಗಳೊಂದಿಗೆ ಪಿತೂರಿ ನಡೆದ ಸ್ಥಳಗಳನ್ನು ಗುರುತಿಸುವುದು.ರಿಯಲ್ ಎಸ್ಟೇಟ್ ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿ ಪರಿಶೀಲಿಸುವುದು.ಎ-1 ಹಾಗೂ ಎ-20 ಆರೋಪಿಗಳೊಂದಿಗೆ ವ್ಯವಹಾರಿಕ ಸಂಪರ್ಕಗಳ ಬಗ್ಗೆ ತನಿಖೆ ನಡೆಸುವುದು.ಕೊಲೆಯಾದ ಬಿಕ್ಲು ಶಿವನಿಗೆ ಎ-1 ಜಗ್ಗ ಮತ್ತು ಎ-5 ಬಸವರಾಜ್ ಅವರಿಂದ ಜೀವ ಬೆದರಿಕೆ ಸಂಬಂಧ ದಾಖಲಾಗಿದ್ದ ದೂರುಗಳ ವಿಚಾರಣೆ.ಈ ಎಲ್ಲಾ ಕಾರಣಗಳನ್ನು ಉಲ್ಲೇಖಿಸಿ ಬೈರತಿ ಬಸವರಾಜ್ ಅವರನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ನ್ಯಾಯಾಲಯವನ್ನು ವಿನಂತಿಸಿದೆ. ಪ್ರಕರಣದ ಮುಂದಿನ ವಿಚಾರಣೆ ನ್ಯಾಯಾಲಯದ ಆದೇಶದ ಮೇಲೆ ಅವಲಂಬಿತವಾಗಿದೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...