‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

Date:

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

ಕನ್ನಡದ ಪ್ರಸಿದ್ಧ ರಿಯಾಲಿಟಿ ಶೋ ಬಿಗ್ ಬಾಸ್ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಗೆ ಬೀಗ ಹಾಕಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸ್ಟುಡಿಯೋದಲ್ಲಿ ಶೋ ನಡೆಯುತ್ತಿದ್ದಾಗ ಮಾಲಿನ್ಯ ನಿಯಂತ್ರಣ ಮಂಡಳಿಯ (KSPCB) ಸೂಚನೆಗಳನ್ನು ಪಾಲಿಸದಿರುವುದು ಕಾರಣವಾಗಿ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಿದ್ದಾರೆ.

ರಾಮನಗರ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ, ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸಿದರು. ಸ್ಟುಡಿಯೋ ಹಾಗೂ ಶೋ ನಿರ್ಮಾಣ ಸಂಸ್ಥೆ ವೇಲ್ಸ್ ಎಂಟರ್ಟೈನ್ಮೆಂಟ್ ಪ್ರೈ. ಲಿ. ಯ ಸ್ಥಳದಲ್ಲಿ ತ್ಯಾಜ್ಯ ವಿಲೇವರಿ, STP ನೀರು ನಿರ್ವಹಣೆ ಹಾಗೂ ನೀರು-ಕರೆಂಟ್ ಸಂಪರ್ಕ ಉಲ್ಲಂಘನೆ ನೋಟೀಸ್‌ನಲ್ಲಿ ಉಲ್ಲೇಖಿತವಾಗಿದೆ. ಸ್ಥಳೀಯ ಅಧಿಕಾರಿಗಳು ಮತ್ತು KSPCB ಈ ಹಿಂದೆ ಹಲವು ಬಾರಿ ಎಚ್ಚರಿಸಿದ್ರು,

ಸಂಸ್ಥೆಯು ಅಗತ್ಯ ಕ್ರಮ ಕೈಗೊಳ್ಳದಿರುವುದರಿಂದ ಇದೀಗ ಕಾನೂನಾತ್ಮಕ ಕ್ರಮದಂತೆ ಬೀಗ ಹಾಕಲಾಗಿದೆ.  ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂಚರ್ಸ್ ಗೆ ಬೀಗ ಜಡಿಯಲು ಮಾಲಿನ್ಯ ನಿಯಂತ್ರಣ ಮಾಡಲು ಆದೇಶ ಹೊರಡಿಸಿತ್ತು . ಆ ಆದೇಶವನ್ನು ಇಂದು ಪೊಲೀಸ್ ಭದ್ರತೆ ಪಡೆದು ರಾಮನಗರ ತಹಸೀಲ್ದಾರ್ , ಕಂದಾಯ  ಇಲಾಖೆ ಅಧಿಕಾರಿಗಳು ಜಾರಿಗೊಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...