ಬಿಗ್‌ಬಾಸ್‌ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ಯಾವಾಗ? ಇಲ್ಲಿದೆ ಉತ್ತರ

Date:

ಬಿಗ್‌ಬಾಸ್‌ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ಯಾವಾಗ? ಇಲ್ಲಿದೆ ಉತ್ತರ

ಕರ್ನಾಟಕದ ದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11, 90ಕ್ಕೂ ಹೆಚ್ಚು ದಿನಗಳನ್ನು ಪೂರೈಸಿದೆ. ಇನ್ನೇನೂ ಕೆಲವು ದಿನಗಳಲ್ಲಿ ಈ 11ರ ಸೀಸನ್ ಗ್ರ್ಯಾಂಡ್ ಫಿನಾಲೆ ಸಮೀಪಿಸುತ್ತಿದೆ. ಹೌದು ಬಿಗ್ ಬಾಸ್‌ಗೆ 17 ಮಂದಿ ಸ್ಪರ್ಧಿಗಳು ಕಾಲಿಟ್ಟಿದ್ದರು. ಪ್ರತಿ ವಾರ ಒಬ್ಬೊಬ್ಬ ಸ್ಪರ್ಧಿಗಳು ದೊಡ್ಮನೆ ಆಟದಿಂದ ಎಲಿಮಿನೇಟ್ ಆಗಲಿದ್ದಾರೆ. ಕಳೆದ ವಾರಾಂತ್ಯ ಐಶ್ವರ್ಯಾ ಶಿಂಧೋಗಿ ಔಟ್ ಆದರು. ಈಗ ಮನೆಯಲ್ಲಿ 9 ಸ್ಪರ್ಧಿಗಳಿದ್ದಾರೆ. ಮೋಕ್ಷಿತಾ ಪೈ, ತ್ರಿವಿಕ್ರಮ್, ಭವ್ಯಾ ಗೌಡ, ಉಗ್ರಂ ಮಂಜು, ಧನರಾಜ್, ರಜತ್, ಗೌತಮಿ, ಹನುಮಂತ, ಚೈತ್ರಾ ಕುಂದಾಪುರ ದೊಡ್ಮನೆಯಲ್ಲಿದ್ದಾರೆ.
ಈ ಬಾರಿ ಒಂದು ವಾರ ಹೆಚ್ಚುವರಿಯಾಗಿ ಬಿಗ್ ಬಾಸ್ ನಡೆಯಲಿದೆ ಎನ್ನಲಾಗುತ್ತಿದೆ. ಅದು ನಿಜವೇ ಆದಲ್ಲಿ ಜನವರಿ 26ರಂದು ಫಿನಾಲೆ ನಡೆಯಲಿದೆ. ಅಂದು ಭಾನುವಾರ ಹಾಗೂ ಗಣರಾಜ್ಯೋತ್ಸವ ಎರಡೂ ಇದೆ. ಈ ವಿಶೇಷ ದಿನದಂದೇ ಫಿನಾಲೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಸದ್ಯ ದೊಡ್ಮನೆಯಲ್ಲಿ ಒಂಭತ್ತು ಮಂದಿ ಇದ್ದಾರೆ. ಈ ಪೈಕಿ ಐವರು ಫಿನಾಲೆ ತಲುಪಲಿದ್ದಾರೆ.
ಉಳಿದ ನಾಲ್ವರ ಪೈಕಿ ಒಂದು ಡಬಲ್ ಎಲಿಮಿನೇಷನ್ ನಡೆದು, ಮತ್ತಿಬ್ಬರು ಒಂದೊಂದು ವಾರ ಎಲಿಮಿನೇಟ್ ಆಗುವ ಸಾಧ್ಯತೆ ದಟ್ಟವಾಗಿದೆ. ಒಂದೊಮ್ಮೆ ಬಿಗ್ ಬಾಸ್ 112 ದಿನಕ್ಕೆ ಪೂರ್ಣಗೊಳ್ಳುತ್ತದೆ ಎಂದಾದರೆ ಡಿಸೆಂಬರ್ 19ಕ್ಕೆ ಫೈನಲ್ ಆಗಲಿದೆ. ಇನ್ನೂ ಕಳೆದ 11 ಸೀಸನ್ ಬಿಗ್ ಬಾಸ್ ಅನ್ನು ನಿರೂಪಣೆ ಮಾಡಿರುವ ಸುದೀಪ್ ಅವರು ಮುಂದಿನ ಸೀಸನ್ ನಿರೂಪಣೆ ಮಾಡಲ್ಲ ಎಂದು ಅಧಿಕೃತವಾಗಿ ಹೇಳಿರೋದು ಫ್ಯಾನ್ಸ್‌ಗೆ ಬೇಸರ ಮೂಡಿಸಿದೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...