ಬಿಗ್ ಬಾಸ್‌ನಿಂದ ಹೊರಬಂದು ಕೋರ್ಟ್ ಗೆ ಹಾಜರಾದ ಚೈತ್ರಾ ಕುಂದಾಪುರ!
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11 ಆರಂಭವಾಗಿ 9 ವಾರಗಳು ಮುಕ್ತಾಯವಾಗಿ, 10ನೇ ವಾರ ಆರಂಭವಾಗಿದೆ. ಇದರ ಬೆನ್ನಲ್ಲೇ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕೋರ್ಟ್ ಕೇಸಿನ ವಿಚಾರಣೆಗೆ ಚೈತ್ರಾ ಕುಂದಾಪುರ ಅವರು ಹೊರಗೆ ಬಂದಿದ್ದಾರೆ.
ಚೈತ್ರಾ ಕುಂದಾಪುರ ಅವರು ನೇರವಾಗಿ ಬಿಗ್ ಬಾಸ್ ಮನೆಯಿಂದ ಬಿಗ್ ಬಾಸ್ ರಿಯಾಲಿಟಿ ಶೋನ ಕಾರಿನಲ್ಲಿನೇ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್‌ಗೆ ಬಂದು ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಹಿರೇ ಹಡಗಲಿಯ ಹಾಲಸ್ವಾಮಿ ಮಠದ ಸ್ವಾಮೀಜಿ ಸೇರಿದಂತೆ ಮೂವರು ಆರೋಪಿಗಳು ವಂಚನೆ ಮಾಡಿದ್ದರು.
ಈ ಪೈಕಿ ಇಂದು ಚೈತ್ರಾ ಕುಂದಾಪುರ ಸೇರಿದಂತೆ ಮೂವರು ಆರೋಪಿಗಳು ಕೋರ್ಟ್‌ಗೆ ಹಾಜರು ಆಗಿದ್ದರು. ಇನ್ನು ಕೋರ್ಟ್‌ಗೆ ಹಾಜರಾಗಲೇಬೇಕು ಎಂಬ ವಾರೆಂಟ್ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಅವರ ನೇರವಾಗಿ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ವಾರೆಂಟ್ ರೀ ಕಾಲ್ ಮಾಡಿಸಿಕೊಂಡಿದ್ದಾರೆ. ಇದಾದ ನಂತರ ಚೈತ್ರಾ ಅವರ ವಿಚಾರಣೆಯನ್ನು ಕೋರ್ಟ್‌ನಿಂದ ಜನವರಿ 13ಕ್ಕೆ ಮುಂದೂಡಿಕೆ ಮಾಡಲಾಗಿದೆ.