ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ಗ್ರ್ಯಾಂಡ್ ಫಿನಾಲೆಗೆ ಕೌಂಟ್ಡೌನ್ ಆರಂಭವಾಗಿದೆ. ಈ ಬಾರಿ ಯಾರು ವಿನ್ನರ್ ಆಗುತ್ತಾರೋ ಎಂಬ ಕುತೂಹಲ ಎಲ್ಲೆಡೆ ಹೆಚ್ಚಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ಸ್ಪರ್ಧಿಗಳ ಗೆಲುವಿಗಾಗಿ ವಿವಿಧ ರೀತಿಯ ಪೂಜೆ, ಪ್ರಾರ್ಥನೆ, ಹಾಗೂ ಬೆಂಬಲ ಕಾರ್ಯಗಳನ್ನು ನಡೆಸುತ್ತಿದ್ದಾರೆ.
ಫೇವರಿಟ್ ಸ್ಪರ್ಧಿಗಳ ಗೆಲುವಿಗಾಗಿ ಜನರು ಸೃಜನಾತ್ಮಕವಾಗಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಹೋಟೆಲ್ಗಳಲ್ಲಿ ಉಚಿತ ಟೀ, ಕಾಫಿ, ತಿಂಡಿ ನೀಡಿದಂತೂ ವೋಟ್ ಮಾಡಲು ಪ್ರೋತ್ಸಾಹಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಗಿಲ್ಲಿ ನಟನಿಗೆ ಅಭಿಮಾನಿಗಳ ಫ್ಲೆಕ್ಸ್, ಬ್ಯಾನರ್, ಭಾವಚಿತ್ರ ಮತ್ತು ಟ್ಯಾಟೂ ತೋರಿಸುತ್ತಿರುವ ದೃಶ್ಯಗಳು ಹರಿದಾಡುತ್ತಿವೆ.
ಬನ್ನೇರುಪ್ಪೆಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಅಶ್ವಿನಿ ಗೌಡಗೆ ವಿಶೇಷ ಪೂಜೆ, ಪ್ರಾರ್ಥನೆ, 100 ಇಡುಗಾಯಿ ಒಡೆಯುವ ಕಾರ್ಯಕ್ರಮ ನಡೆದಿದ್ದು, ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಮತ್ತು ಬೆಂಬಲಿಗರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕರಾವಳಿ ಬೆಡಗಿ ರಕ್ಷಿತ, ರಘು, ಧನುಷ್, ಕಾವ್ಯ್ ಸೇರಿದಂತೆ ಹಲವರಿಗೆ ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿರುವ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.






