ದೇಶವೇ ಬೆಚ್ಚಿ ಬೀಳುವಂಥ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಪಶು ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆಗೈದಿದ್ದ ನಾಲ್ವರು ಆರೋಪಿಗಳನ್ನು ಇಂದು ಬೆಳಗ್ಗೆ ಸ್ಥಳ ಪರಿಶೀಲನೆಗೆಂದು ಕೃತ್ಯ ನಡೆದ ಸ್ಥಳಕ್ಕೆ ಇವರುಗಳನ್ನು ಕರೆದುಕೊಂಡು ಹೋಗಿದ್ದ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ ಇದೇ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ. ಇದರ ಪರಿಣಾಮ ನಾಲ್ವರು ಆರೋಪಿಗಳೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಬೆಳ್ಳಂಬೆಳಗ್ಗೆ ಈ ಸುದ್ದಿ ಹರಡುತ್ತಿದ್ದಂತೆಯೇ ದೇಶದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ಎನ್ ಕೌಂಟರ್ ಮಾಡಿದ್ದಾರೆ ಆರೋಪಿಗಳಿಗೆ ಸರಿಯಾದ ಶಿಕ್ಷೆಯಾಗಿದೆ ಎಂದು ಎಲ್ಲೆಡೆ ಮಾತು ಕೇಳಿ ಬರ್ತಾ ಇದೆ ಆರೋಪಿಗಳಾದ ಮಹಮ್ಮದ್ ಆರೀಫ್, ಜೊಲ್ಲು ಶಿವ, ಚನ್ನಕೇಶವಲು ಹಾಗೂ ನವೀನ್ ಎಂಬವರನ್ನು ಷಾದ್ ನಗರದಲ್ಲಿ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆಂದು ಹೇಳಲಾಗಿದೆ.