ಬಿಜೆಪಿಗೆ ಬಿಗ್ ಶಾಕ್: ಮಾಜಿ ಶಾಸಕ, RSS ಕಟ್ಟಾಳು ಕಾಂಗ್ರೆಸ್ ಸೇರ್ಪಡೆ

Date:

ದಾವಣಗೆರೆ: ಮಾಜಿ ಶಾಸಕ, ಆರ್ಎಸ್ಎಸ್ ಕಟ್ಟಾಳು ಟಿ.ಗುರುಸಿದ್ದನಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರ ನಿವಾಸಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೇಟಿ ನೀಡಿ ಅವರನ್ನು ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಂಡರು. ಇನ್ನು ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗುರುಸಿದ್ದನಗೌಡ ಪುತ್ರ ಡಾ.ರವಿಕುಮಾರ್ ಸಹ ಕಾಂಗ್ರೆಸ್ ಸೇರಿದರು. ಈ ಮೂಲಕ ಬಿಜೆಪಿಗೆ ಆಘಾತವಾಗಿದೆ.
ಈ ವೇಳೆ ಮಾತನಾಡಿರುವ ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ದಾವಣಗೆರೆ ಬಿಜೆಪಿಯಲ್ಲಿ ಉಸಿರು ಗಟ್ಟುವ ವಾತಾವರಣ ಇದೆ. ಇದೇ ಕಾರಣಕ್ಕೆ ಕಟ್ಟಾ ಆರ್ ಎಸ್ ಎಸ್ ವ್ಯಕ್ತಿ ಆಗಿದ್ದ ಗುರುಸಿದ್ದನಗೌಡರು ಕಾಂಗ್ರೆಸ್ ಸೇರಿದ್ದಾರೆ. ಗುರುಸಿದ್ದನಗೌಡ್ರು ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರಿರುವುದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಅವರ ಮಾರ್ಗದರ್ಶನದಲ್ಲಿ ನಾವುಗಳು ಮುನ್ನಡೆಯುತ್ತವೆ ಎಂದರು.

Share post:

Subscribe

spot_imgspot_img

Popular

More like this
Related

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

GST ಬದಲಾವಣೆಯಿಂದ ರಾಜ್ಯದ ಜನರಿಗೆ 15 ಸಾವಿರ ಕೋಟಿ ರೂಪಾಯಿ ನಷ್ಟ:...

ದೀಪಾವಳಿ ಟೆಂಪಲ್ ರನ್‌ಗೆ ಡಿಕೆಶಿ ಸಿದ್ಧ – ಮಂತ್ರಾಲಯ, ರಾಯಚೂರಿಗೆ ನಾಳೆ ಭೇಟಿ

ದೀಪಾವಳಿ ಟೆಂಪಲ್ ರನ್‌ಗೆ ಡಿಕೆಶಿ ಸಿದ್ಧ – ಮಂತ್ರಾಲಯ, ರಾಯಚೂರಿಗೆ ನಾಳೆ...

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್

ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ: 4 ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್...

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.!

ಈ ಸಮಸ್ಯೆ ಇರುವವರು ಯಾವುದೇ ಕಾರಣಕ್ಕೂ ಸೀತಾಫಲ ತಿನ್ನಬಾರದು.! ಸೀತಾಫಲ (Custard Apple)...