ಬೆಳಗಾವಿ:“ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗುಡುಗಿದ್ದಾರೆ. ಸುವರ್ಣಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದ ಅವರು,
“ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ” ಎಂದು ಹೇಳಿದರು.
ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಯಲ್ಲ !
Date: