ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಕರ್ನಾಟಕದ ಪಾಲಿನ ಹಣ ಕೊಡಿಸಲಿ: ಡಿ.ಕೆ.ಶಿವಕುಮಾರ್
ಬೆಂಗಳೂರು: ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಕರ್ನಾಟಕದ ಪಾಲಿನ ಹಣ ಕೊಡಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಿಜೆಪಿ ಧರ್ಮಸ್ಥಳ ಯಾತ್ರೆಯ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದರು.
ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಇವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲಾ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ ಹೋರಾಟ ಮಾಡಬೇಕು. ರಾಜ್ಯಕ್ಕೆ ಅನುದಾನ ತರಬೇಕು” ಎಂದು ಛೇಡಿಸಿದರು.