No menu items!
4.8 C
Munich
Saturday, May 2, 2026

ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ !

Must read

ಚಿಕ್ಕಬಳ್ಳಾಪುರ: ನಾನು ರಾಜೀನಾಮೆ ಕೊಟ್ರೆ ಬಿಜೆಪಿಯವರು ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ತಿಳಿಸಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ.
ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.
ಇನ್ನೂ ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article