ಮೈಸೂರು: ಇಂದು ಹೊರಬೀಳಲಿರುವ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಕೇಂದ್ರದಲ್ಲಿ ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಅನ್ನೋದು ಕುತೂಹಲ ಇಮ್ಮಡಿಗೊಳಿಸಿದೆ. ಇನ್ನೂ ರಾಜವಂಶಸ್ಥ ಯದುವೀರ್ ಒಡೆಯರ್, ಬಿಜೆಪಿ ಅಭ್ಯರ್ಥಿಯಾಗಿರುವುದಕ್ಕಾಗಿ ಮೈಸೂರು-ಕೊಡಗು ಲೋಕ ಕ್ಷೇತ್ರ ಈ ಬಾರಿ ಗಮನ ಸೆಳೆದಿದೆ. ಸಿಎಂ ಸಿದ್ದರಾಮಯ್ಯ ಆಪ್ತ ಎಂ ಲಕ್ಷ್ಮಣ್ ಕಣದಲ್ಲಿದ್ದಾರೆ.
ಸದ್ಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ಆರಂಭಿಕ 7008 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಹಿನ್ನಡೆಯಲ್ಲಿದ್ದಾರೆ. ಇನ್ನು ಹಲವು ಸುತ್ತುಗಳು ಮತ ಎಣಿಕೆಯ ಕಾರ್ಯ ನಡೆಯಬೇಕಿದೆ. ಇನ್ನು ಹಲವು ಸುತ್ತುಗಳಿದ್ದು ಜನ ಯಾರ ಕೈಹಿಡಿಯಲಿದ್ದಾರೆ ಎನ್ನವುದನ್ನು ಕಾದು ನೋಡಬೇಕಿದೆ.
ಬಿಜೆಪಿ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ಮುನ್ನಡೆ.!
Date: