ಮಂಗಳೂರು: ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಯತ್ನ ಮಾಡಿರುವ ಘಟನೆ ಮಂಗಳೂರಿನ ಬೋಳಿಯಾರ್ ಬಳಿ ನಡೆದಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯರ್ ನಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಂದರ್ಭದಲ್ಲಿ ಮಾತಿನ ಚಕಮಕಿ ಏರ್ಪಟ್ಟು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಹತ್ಯೆ ಯತ್ನ ಸುದ್ದಿ ತಿಳಿದು ಕೊಣಾಜೆ ಪೊಲೀಸ್ ಠಾಣೆ ಮುಂದೆ ಬಿಜೆಪಿ ಕಾರ್ಯಕರ್ತರು ಜಮಾಯಿಸಿದರು. ದ.ಕ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಜಿಲ್ಲಾ ಬಿಜೆಪಿ ನಾಯಕರು ಭೇಟಿ ನೀಡಿ ಕಾರ್ಯಕರ್ತರ ಮನವೊಲಿಕೆಗೆ ಯತ್ನಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಯತ್ನ !
Date: