No menu items!
12.1 C
Munich
Saturday, September 12, 2026

ಬಿಜೆಪಿ- ಜೆಡಿಎಸ್ ನಾಯಕರ ಜೊತೆ ಅಮಿತ್ ಶಾ ಬ್ರೇಕ್ ಫಾಸ್ಟ್ ಮೀಟಿಂಗ್

Must read

ಬೆಂಗಳೂರು,: ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಜ್‌ವೆಸ್ಟ್‌ಎಂಡ್‌ ಹೋಟೆಲ್‌ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಮಾಡಿದ್ದಾರೆ. ಹೆಚ್ಎಎಲ್ಗೆ ವಿಶೇಷ ವಿಮಾನದಲ್ಲಿ ತಡರಾತ್ರಿ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ತಾಜ್ ವೆಸ್ಟ್ಎಂಡ್ನಲ್ಲಿ ವಾಸ್ತವ್ಯ ಹೂಡಿದ್ದರು. ಸದ್ಯ ಈಗ ಬಿಜೆಪಿ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ.
ಜೆಡಿಎಸ್ ಬಿಜೆಪಿ ಸಮನ್ವಯ ಕುರಿತು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಂದೇಶ ರವಾನಿಸಿದ್ದಾರೆ. ಈ ಮೀಟಿಂಗ್ನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ‌. ದೇವೆಗೌಡ, ಮಾಜಿ ಸಚಿವರಾದ ಸಿಎಸ್ ಪುಟ್ಟರಾಜು, ಬಂಡೆಪ್ಪಕಾಶಂಪುರ, ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಕೇಂದ್ರ ಸಚಿವ ಸದಾನಂದಗೌಡ, ಶಾಸಕ ಅಶ್ವತ್ ನಾರಾಯಣ್, ಮಾಜಿ ಸಚಿವ ಗೋವಿಂದ ಕಾರಜೋಳ, ಸಾರಾ ಮಹೇಶ್, ವೆಂಕಟರಾವ್ ನಾಡಗೌಡ ಉಪಸ್ಥಿತರಿದ್ದರು.

- Advertisement -spot_img

More articles

- Advertisement -spot_img

Latest article