ಬೆಂಗಳೂರು: 2019ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ದಳಪತಿಗಳಿಗೆ ಸೆಡ್ಡು ಹೊಡೆದಿದ್ದ ನಾಯಕಿ ಸುಮಲತಾ ಅಂಬರೀಶ್ ಇಂದು ಭಾರತೀಯ ಜನತಾ ಪಕ್ಷ ಕ್ಕೆ ಸೇರ್ಪಡೆಗೊಂಡಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಮಲತಾ ಅವರಿಗೆ ಪಕ್ಷದ ಬಾವುಟ ನೀಡಿ ಬಿಜೆಪಿ ನಾಯಕರು ಪಕ್ಷಕ್ಕೆ ಬರಮಾಡಿಕೊಂಡರು. ಬಳಿಕ ರಾಧಾಮೋಹನ್ ದಾಸ್ ಅಗರವಾಲ್ ಅವರು ಸುಮಲತಾರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದ ಪತ್ರ ನೀಡಿದರು.
ಸುಮಲತಾ ಅಂಬರೀಶ್ ಜೊತೆಗೆ ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಎಸ್ ಶಿವರಾಮೇಗೌಡ (ಕಾಂಗ್ರೆಸ್ ತೊರೆದು ಬಿಜೆಪಿ ಸೆರ್ಪಡೆ), ಸಚಿವ ಶಿವಾನಂದ ಪಾಟೀಲ್ ಸಂಬಂಧಿ ಹರ್ಷಗೌಡ ಪಾಟೀಲ್, ಹಳಿಯಾಳದ ಶ್ರೀನಿವಾಸ್ ಹಾಗೂ ಹಳಿಯಾಳದ ತುಕಾರಾಂ ಗೌಡ ಪಾಟೀಲ್ ಬಿಜೆಪಿಗೆ ಸೇರಿದರು. ಬಿ.ಎಸ್ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಆರ್ ಅಶೋಕ್, ಡಿ.ವಿ ಸದಾನಂದ ಗೌಡ, ಸಿ.ಟಿ ರವಿ, ಕೆ.ಸಿ ನಾರಾಯಣ ಗೌಡ, ಮುನಿರತ್ನ ಹಾಗೂ ಮಂಡ್ಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಸುಮಲತಾ ಅಂಬರೀಶ್
Date: