ಬೆಂಗಳೂರು: ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ. ಹೌದು ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪದಡಿ ಕೆಎಸ್ ಈಶ್ವರಪ್ಪ ವಿರುದ್ಧ ವಿರುದ್ಧ ಈಶ್ವರಪ್ಪ ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ವೇಳೆ ಮತಪ್ರಚಾರ ಮಾಡಿದ್ದರು. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.
ಈಶ್ವರಪ್ಪ ವಿರುದ್ಧ ತುಂಗಾನಗರ ಠಾಣೆಗೆ ಚುನಾವಣಾಧಿಕಾರಿ ದೂರು ಸಲ್ಲಿಸಿದ್ದಾರೆ. ಈ ಕುರಿತು ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು
Date:






