No menu items!
8.4 C
Munich
Wednesday, April 15, 2026

ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಎಂದು ನಾನು ಹೇಳಿಲ್ಲ !

Must read

ದಾವಣಗೆರೆ;- ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆಂದು ನಾನು ಹೇಳಿಲ್ಲ ಎಂದು ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಲ್ಲಿ ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಕಾಂಗ್ರೆಸ್ ಸೇರಲು ನಾನು ಅರ್ಜಿ ಹಾಕಿಲ್ಲ. ಯಾರ ಮನೆ ಬಾಗಿಲನ್ನೂ ತುಳಿದಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಸಚಿವರಾದ ಎಸ್ಸೆಸ್ ಮಲ್ಲಿಕಾರ್ಜುನ, ಕೃಷ್ಣ ಭೈರೇಗೌಡ, ಚಲುವರಾಯಸ್ವಾಮಿ, ಇತರರನ್ನು ಭೇಟಿಯಾಗಿದ್ದು ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಹೊರತು ಬೇರೆ ಯಾವುದಕ್ಕೂ ಅಲ್ಲ ಎಂದು ಹೇಳಿದರು.
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ನಾನೆಂದಿಗೂ ರಾಜಕಾರಣ ಮಾಡಿಲ್ಲ. ಹಿಂದೆ ಶಾಂತನಗೌಡರು 2 ಬಾರಿ ಶಾಸಕರಾಗಿದ್ದಾಗಲೂ ಸಂಪೂರ್ಣ ಸಹಕಾರ ನೀಡಿದ್ದೇನೆ. ಕ್ಷೇತ್ರದಲ್ಲಿ ಬರ ಆವರಿಸಿದ್ದರಿಂದ ಅನುದಾನ ಬಿಡುಗಡೆ ಮಾಡಲು ಸಿಎಂ, ಡಿಸಿಎಂ, ಸಚಿವರಿಗೆ ಮನವಿ ಮಾಡಿದರೆ ಶಾಸಕ ಶಾಂತನಗೌಡರಿಗೆ ಏಕೆ ಸಿಟ್ಟು ಎಂದು ಪ್ರಶ್ನಿಸಿದರು. ಶಾಸಕ ಶಾಂತನಗೌಡ ಶಾಸಕರಾಗಿ 6 ತಿಂಗಳಾದರೂ ಕ್ಷೇತ್ರದಲ್ಲಿ ಎಷ್ಟು ಸಲ ಬರ ಅಧ್ಯಯನ ಮಾಡಿದ್ದೀರಿ? ಬರ ಅಧ್ಯಯನ ನಡೆಸಿದ್ದರೆ ಅಭಿವೃದ್ಧಿ ಮತ್ತು ಬರಗಾಲದಲ್ಲಿ ರಾಜಕೀಯ ಮಾಡಬಾರದೆಂಬ ಕಾರಣಕ್ಕೆ ನಾನು ಸುಮ್ಮನಿದ್ದೇನೆಂದರೆ ಅದು ನನ್ನ ದೌರ್ಬಲ್ಯವಲ್ಲ. ನಿಮಗಿಂತ ಹತ್ತು ಪಟ್ಟು ಹೆಚ್ಚು ಮಾತನಾಡಲು ನನಗೂ ಬರುತ್ತದೆ ಎಂದು ಎಚ್ಚರಿಸಿದರು.

- Advertisement -spot_img

More articles

- Advertisement -spot_img

Latest article