ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾತನಾಡಿದ ಪ್ರಭಾಕರ್ ಭಟ್, ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೂ, ಸಂಘಕ್ಕೂ ಸಂಬಂಧವಿಲ್ಲ. ಈ ವಿಚಾರದಲ್ಲಿ ಸಂಘ ಮೂಗು ತೂರಿಸುವುದಿಲ್ಲ. ಇದನ್ನು ಪಕ್ಷ ನೋಡಿಕೊಳ್ಳುತ್ತದೆ. ಸಂಘಕ್ಕೂ ಇದಕ್ಕೂ ಸಂಬಂಧವಿಲ್ಲ. ಸಂಘದಿಂದ ಯಾರೂ ಕೂಡ ಆಕಾಂಕ್ಷಿಗಳಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.ಇನ್ನು ಮೈತ್ರಿ ಸರ್ಕಾರದ ವಾಗ್ದಾಳಿ ನಡೆಸಿದ ಪ್ರಭಾಕರ್ ಭಟ್, ಕರ್ನಾಟಕ ರಾಜ್ಯದ 70 ವರ್ಷಗಳ ಇತಿಹಾಸದಲ್ಲಿ ಸರ್ಕಾರವೇ ಇಲ್ಲ ಎನ್ನುವ ಸ್ಥಿತಿ ಈಗ ನಿರ್ಮಾಣವಾಗಿದೆ.
37 ಸ್ಥಾನ ಇರುವ ಪಕ್ಷದವರು ಮುಖ್ಯಮಂತ್ರಿಯಾಗಿದ್ದಾರೆ. ಈ ಸರ್ಕಾರ ಚುನಾವಣಾ ಫಲಿತಾಂಶದ ಬಳಿಕ ಬೀಳಲಿದೆ ಎಂದರು.