No menu items!
7.9 C
Munich
Wednesday, September 23, 2026

ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಕರಣ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

Must read

ಬೆಂಗಳೂರು: ಮಾನನಷ್ಟ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರಿಗೆ ಇಂದು 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ. ಮಾಜಿ ಸಂಸದ ಡಿ.ಕೆ ಸುರೇಶ್‌, ರಾಹುಲ್‌ ಗಾಂಧಿ ಅವರಿಗೆ 50 ಸಾವಿರ ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿದ್ದು, ಜಾಮೀನು ಮಂಜೂರು ಮಾಡಲಾಗಿದೆ.
ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿ ಅವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ಇಂದು ಕೋರ್ಟ್‌ಗೆ ಹಾಜರಾದ ಹಿನ್ನೆಲೆ ಜಾಮೀನು ಮಂಜೂರು ಮಾಡಿದೆ.

- Advertisement -spot_img

More articles

- Advertisement -spot_img

Latest article