ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್ಐಟಿ ದಾಳಿ!
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಬಹಳಷ್ಟು ಒತ್ತಡಗಳಿತ್ತು. ಜಾತಿ ನಿಂದನೆ, ಅ*ತ್ಯಾಚಾರ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಈ ಪ್ರಕರಣದ ವಿಚಾರಣೆಗೆ ವಿಶೇಷ ತನಿಖಾ ತಂಡವನ್ನು ನೇಮಿಸಿತ್ತು. ಇದರ ಬೆನ್ನಲ್ಲೇ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿದರು.
ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ಸದ್ಯ ಮೂರು ಕೇಸ್ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್ಎಸ್ಎಲ್ ತಂಡದ ಜತೆಗೇ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.