ದಕ್ಷಿಣ ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲ್ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿಶೇಷ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ವಿಶೇಷ ಕೋರ್ಟ್ ನ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಆದೇಶ ಹೊರಡಿಸಿದ್ದಾರೆ. ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವಿದ್ದು, ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .