ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು
ನವದೆಹಲಿ: ಮಾಜಿ ಉಪ ಪ್ರಧಾನಿ, ಭಾರತ ರತ್ನ ಎಲ್‌ಕೆ ಅಡ್ವಾಣಿ ಅವರನ್ನು ದೆಹಲಿಯ ಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು.
ಸದ್ಯ ಎಲ್‌ಕೆ ಅಡ್ವಾಣಿ ಅವರನ್ನು ತಜ್ಞ ವೈದ್ಯರ ನಿಗಾದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಮಾಹಿತಿ ಪ್ರಕಾರ, ದೇಶದ ಮಾಜಿ ಗೃಹ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ದಿನನಿತ್ಯದ ತಪಾಸಣೆಗಾಗಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.