ಬಿಜೆಪಿ ಹಿರಿಯ ಮುಖಂಡ ಕಾಪು ಸಿದ್ದಲಿಂಗ ಸ್ವಾಮಿ ವಿಧಿವಶ

Date:

ಮೈಸೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕಾಪುಸಿ ನಿಧನರಾಗಿದ್ದಾರೆ. 2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು.
ವರುಣ ಕ್ಷೇತ್ರದ ಬಿಜೆಪಿಯಲ್ಲಿ ಹಿಡಿತ ಹೊಂದಿದ್ದ ಸಿದ್ದಲಿಂಗಸ್ವಾಮಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಕಾಪುಸಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.ಇಂದು ಮೈಸೂರಿನ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ಅಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...