ಬಿಡದಿ ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ರಾಮನಗರ: ಇನ್ನು ಇತ್ತೀಚೆಗೆ ಹಿಂದೂ ದೇವಾಲಯಗಳ ಮೇಲೂ ಈ ಬಾಂಬರ್‌ಗಳ ಕಣ್ಣು ಬಿದ್ದಿತ್ತು. ಅಲ್ಲದೇ ಶಾಲಾ-ಕಾಲೇಜುಗಳ ಮೇಲೂ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದ್ರೆ ಈ ಮಧ್ಯೆ ಬಾಂಬರ್‌ಗಳ ಕಣ್ಣು ರಾಜ್ಯಕ್ಕೂ ಬಿದ್ದಿದೆ. ಇದೀಗ ಬಿಡದಿಯ ರೈಲ್ವೆ ನಿಲ್ದಾಣಕ್ಕೆ ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆದಿದೆ.
ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ. ಬಿಡದಿ ರೈಲ್ವೆ ನಿಲ್ದಾಣವನ್ನು ಇಂಚಿಂಚೂ ಪರಿಶೀಲನೆ ನಡೆಸಿದ್ದು, ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇರಿಸಲಾಗಿದೆ.