ಬಿಡುಗಡೆಗೂ ಮುನ್ನವೇ ಮಾಸ್ಟರ್ ಸಿನಿಮಾ ಲೀಕ್!

Date:

ಸಂಕ್ರಾಂತಿ ಹಬ್ಬದ ಪ್ರಯುಕ್ತ ಇದೇ ಬುಧವಾರದಂದು ವಿಜಯ್ ಅಭಿನಯದ ಬಹುನಿರೀಕ್ಷಿತ ಚಿತ್ರ ಮಾಸ್ಟರ್ ಸಿನಿಮಾ ತೆರೆಗೆ ಬರಲಿದೆ. ವಿಜಯ್ ಮತ್ತು ವಿಜಯ್ ಸೇತುಪತಿ ಅಭಿನಯದ ಮಾಸ್ಟರ್ ಸಿನಿಮಾ ಕರೋನಾ ನಂತರ ಬಿಡುಗಡೆಯಾಗುತ್ತಿರುವ ಬಿಗ್ ಬಜೆಟ್ ಚಿತ್ರಗಳಲ್ಲಿ ಮೊದಲನೆಯದು.. ಲೋಕೇಶ್ ಕನಕರಾಜ್ ನಿರ್ದೇಶನವಿರುವ ಈ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಇನ್ನು ಚಿತ್ರದ ಮುಂಗಡ ಬುಕ್ಕಿಂಗ್ ಈಗಾಗಲೇ ಆರಂಭವಾಗಿದ್ದು ಮೊದಲ ದಿನದ ಶೋಗಳು ಸೋಲ್ಡ್ ಔಟ್ ಆಗಿವೆ.

 

 

ವಿಶಾಲ ದೊಡ್ಡಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿರುವ ಮಾಸ್ಟರ್ ಚಿತ್ರಕ್ಕೆ ಇದೀಗ ನಿರಾಸೆ ಉಂಟಾಗಿದೆ. ಹೌದು ನಿನ್ನೆ ರಾತ್ರಿಯಿಂದಲೇ ಮಾಸ್ಟರ್ ಚಿತ್ರದ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಮಾಸ್ಟರ್ ಸಿನಿಮಾ ಲೀಕ್ ಆಗಿದ್ದು ಚಿತ್ರದ ಒಂದಷ್ಟು ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

 

ಇನ್ನು ಮಾಸ್ಟರ್ ಸಿನಿಮಾದ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡತೊಡಗಿದ ನಂತರ ನಿರ್ದೇಶಕ ಲೋಕೇಶ್ ಕನಕರಾಜ ಅವರು ಇದು ತುಂಬಾ ಕಷ್ಟಪಟ್ಟು ಮಾಡಲಾದ ಸಿನಿಮಾ ಬಹುದಿನಗಳ ಕನಸು ದಯವಿಟ್ಟು ಯಾರೂ ಸಹ ದೃಶ್ಯಗಳನ್ನು ಶೇರ್ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡರು.

 

ವಿಜಯ್ ಅಭಿನಯದ ಸಿನಿಮಾ ಬಿಡುಗಡೆಗೆ ಮುನ್ನ ಲೀಕ್ ಆಗಿರುವುದು ಇದೇ ಮೊದಲೇನಲ್ಲ.. ಹಿಂದೆ ವಿಜಯ್ ಅಭಿನಯದ ತೇರಿ ಸಿನಿಮಾ ಸಹ ಬಿಡುಗಡೆಗೂ ಮುನ್ನ ಲೀಕ್ ಆಗಿತ್ತು ಮತ್ತು ಬಿಡುಗಡೆಯ ನಂತರ ಅದು ಬ್ಲಾಕ್ಬಸ್ಟರ್ ಸಿನಿಮಾ ಆಯಿತು. ಇನ್ನು ಅಭಿಮಾನಿಗಳು ತೇರಿ ರೀತಿಯೇ ಮಾಸ್ಟರ್ ಸಹ ಸೂಪರ್ ಹಿಟ್ ಆಗಲಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ..

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...