ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರೇ ಬೊಮ್ಮಾಯಿ ನಿಮ್ಮನ್ನು ಸುಮ್ಮನೆ ಬಿಡಲ್ಲ!

0
46

ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ‌ ಮಿಡಿಯುತಿದೆ. ಅದರೆ ಕೆಲವರು ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿರೋದು ತೀರಾ ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಅಂಗವಾಗಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಗೆ ಬಂದು ಮತ ಚಲಾಯಿಸಿದರು. ಮತ ಚಲಾವಣೆ ಬಳಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ‌ ಮಿಡಿಯುತಿದೆ. ಅದರೆ ಕೆಲವರು ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿರೋದು ತೀರಾ ಖಂಡನೀಯ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ನಿನ್ನೆ ಏರ್ ಫೋರ್ಸ್ ಕಮಾಂಡೋ ಆಸ್ಪತ್ರೆಗೆ ಭೇಟಿ ನೀಡಿ ಗ್ರೂಪ್ ಕ್ಯಾಪ್ಟನ್ ವರುಣ ಪ್ರತಾಪ ಸಿಂಗ್ ಬಗ್ಗೆ ಮಾಹಿತಿ ಪಡೆದುಕೊಂಡು ಬಂದಿದ್ದೇನೆ. ಅಲ್ಲಿ ಉತ್ತಮ ವೈದ್ಯರ ತಂಡವಿದೆ ಎಂದು ಇದೆ ವೇಳೆ ಸಿಎಂ ಬೊಮ್ಮಾಯಿ ತಿಳಿಸಿದರು.

 

ಉಡುಪಿ ಮೂಲದ ಬರಹಗಾರನ ವಿರುದ್ದ ಫೇಸ್‌ಬುಕ್‌ನಲ್ಲಿ ಆಕ್ರೋಶ:
ಉಡುಪಿ: ಬಿಪಿನ್ ರಾವತ್ ನಿಧನದ ಬಗ್ಗೆ ವಿಕೃತಿ ಮೆರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿರುವ ಉಡುಪಿ ಮೂಲದ ಬರಹಗಾರರೊಬ್ಬರ ವಿರುದ್ದ ಫೇಸ್‌ಬುಕ್‌ನಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ. ಈ ಸಂಬಂಧ ಉಡುಪಿ ಪೊಲೀಸರಿಗೆ ಟ್ಯಾಗ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಈ ಕೂಡಲೇ ಅವರನ್ನು ಬಂಧಿಸಬೇಕೆಂದು ಸಮಾಜಿಕ ಜಾಲತಾಣದಲ್ಲಿ ಆಗ್ರಹಗಳು ಕೇಳಿಬಂದಿವೆ.

ಕೇಸ್ ರೀ ಓಪನ್ ಮಾಡಿಲ್ಲ -ಸಿಎಂ ಬೊಮ್ಮಾಯಿ ಸ್ಪಷ್ಟನೆ :
ಇನ್ನು, ಮಹಾದಾಯಿ ಹೋರಾಟಗಾರರ ಮೇಲಿನ ಕೇಸ್ ವಿಚಾರ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ ಹೋರಾಟಗಾರರ ಮೇಲಿನ ಕೇಸ್ ರೀ ಓಪನ್ ಮಾಡಿಲ್ಲ. ಕೇಸ್ ವಾಪಸ್ ಪಡೆಯುವ ಪ್ರಕ್ರಿಯೆ ಕೋರ್ಟ್‌ನಲ್ಲಿ ನಡೆಯುತ್ತಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here