ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನ್ಯಾಯಾಲಯ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನೀರು ನಮ್ಮ ಹಕ್ಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ನ್ಯಾಯಾಲಯ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ.
ಕೇಂದ್ರ ಸರ್ಕಾರ ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು. ಇದರಿಂದ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದೆ. ಮೇಕೆದಾಟು ಅಣೆಕಟ್ಟಿನಿಂದ ತಮಿಳುನಾಡಿಗೆ ನಿಗದಿಯಾಗಿರುವ ನೀರಿನ ಪಾಲನ್ನು ನೀಡಲು ಅನುಕೂಲವಾಗುತ್ತದೆ ಹೊರತು ನಮ್ಮ ಕರ್ನಾಟಕದ ಉಪಯೋಗಕ್ಕೆ ಬಳಸುವುದಿಲ್ಲ ಎಂದರು.
ಇನ್ನೂ ಬಿಬಿಎಂಪಿ ಆಸ್ತಿಗಳನ್ನು ಸರ್ಕಾರ ಅಡವಿಡುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಯಾವ ಅಡಮಾನವೂ ಇಲ್ಲ. ನಮ್ಮ ಬಿಬಿಎಂಪಿಯ ಆಸ್ತಿಗಳ ರಕ್ಷಣೆ ಹಾಗೂ ಎಷ್ಟು ಆಸ್ತಿಗಳಿವೆ ಎನ್ನುವ ಮರು ಸಮೀಕ್ಷೆ, ಗುತ್ತಿಗೆ ನವೀಕರಣ ಸೇರಿದಂತೆ ಇತರೇ ಕೆಲಸಗಳಿಗಾಗಿ ನಮ್ಮ ಅಂದಾಜು ವಿಭಾಗವನ್ನು ಭದ್ರಗೊಳಿಸಿ ದಾಖಲೆಗಳನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಯಾವುದೇ ಅಡಮಾನವೂ ಇಲ್ಲ, ಏನೂ ಇಲ್ಲ ಎಂದು ಹೇಳಿದರು.
ಬಿಬಿಎಂಪಿ ಆಸ್ತಿಗಳನ್ನು ಸರ್ಕಾರ ಅಡವಿಡುತ್ತಿದೆ ವಿಚಾರ: ಡಿ.ಕೆ.ಶಿವಕುಮಾರ್ ಹೇಳಿದ್ದೇನು..?
Date: