ಬೆಂಗಳೂರು:- ಹಿಂದಿನ ಸರ್ಕಾರದ ಅವಧಿಯಲ್ಲಿ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ’ ಎಂಬ ಆರೋಪಗಳ ಕುರಿತಂತೆ ತನಿಖೆ ನಡೆಸಲು ವಿಶೇಷ ತನಿಖಾ ಸಮಿತಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸರ್ಕಾರದ ಆದೇಶ ಪ್ರಶ್ನಿಸಿ, ‘ಮೆಸರ್ಸ್ ನಿಕ್ಷೇಪ ಇನ್ಫ್ರಾ ಪ್ರಾಜೆಕ್ಟ್ಸ್’ ಸೇರಿದಂತೆ 17 ಗುತ್ತಿಗೆ ಕಂಪನಿಗಳು ಮತ್ತು 28 ಮಂದಿ ಗುತ್ತಿಗೆದಾರರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಹೊಸ ಸರ್ಕಾರವು ಈ ಹಿಂದಿನ ಸರ್ಕಾರದ ನಿಲುವಿಗಿಂತಲೂ ಭಿನ್ನವಾದ ನಿಲುವು ಕೈಗೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಜ್ಯ ಸರ್ಕಾರ ತನ್ನ ಕ್ರಮದ ಕುರಿತು ಸಮರ್ಥನೆ ನೀಡಬೇಕಿದೆ. ಅದಕ್ಕಾಗಿ ತನಿಖಾ ಸಮಿತಿ ಮತ್ತು ಏಕವ್ಯಕ್ತಿ ತನಿಖಾ ಆಯೋಗ ರಚನೆ ಮಾಡಿರುವ ಸರ್ಕಾರದ ಆದೇಶ, ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.