ಬಿರು ಬಿಸಿಲಿನಲ್ಲೇ ಕುಳಿತು ಸಿಎಂ ನೇತೃತ್ವದಲ್ಲಿ ಕೇಂದ್ರ ವಿರುದ್ಧ ಪ್ರತಿಭಟನೆ

0
28

ಬೆಂಗಳೂರು: ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಶೀಘ್ರ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ, ಸಚಿವರು ಸೇರಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಚೊಂಬೇಶ್ವರ ಮೋದಿಗೆ ಎಂಬ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಲೋಕಸಮರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಬರ ಪರಿಹಾರ ಬಿಡುಗಡೆ ವಿಳಂಬ, ತೆರಿಗೆ ತಾರತಮ್ಯವನ್ನು ಪ್ರಮುಖ ಅಸ್ತ್ರವಾಗಿ ಬಳಸಿದ್ದು, ಶೀಘ್ರದಲ್ಲಿ ಬರ ಪರಿಹಾರ ಬಿಡುಗಡೆಗೊಳಿಸುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಕೃಷ್ಣ ಬೈರೇಗೌಡ, ರಾಮಲಿಂಗಾ ರೆಡ್ಡಿ, ಕೆ.ಜೆ.ಜಾರ್ಜ್, ಶಾಸಕರಾದ ರಿಜ್ವಾನ್ ಅರ್ಷದ್, ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ, ಮೇಕೆದಾಟು ಯೋಜನೆ ಅನುಷ್ಠಾನ, ಮಹದಾಯಿ ಯೋಜನೆಗೆ ಅನುಮತಿ ನೀಡುವಂತೆ ಒತ್ತಾಯಿಸಿದರು.