ಬಿಸಿಯೂಟದಲ್ಲಿ ಎಷ್ಟು ಮಕ್ಕಳು ಮೊಟ್ಟೆ ಬೇಕು ಎಂದಿದ್ದಾರೆ ಗೊತ್ತಾ?

0
74

ಮೊಟ್ಟೆಗಳನ್ನು ಸೇವಿಸುವುದರಿಂದ ಶಾಲಾ ವಿದ್ಯಾರ್ಥಿಗಳ ಬೆಳವಣಿಗೆ ಅಂದರೆ ತೂಕ ಮತ್ತು ಎತ್ತರದ ಸಂಪೂರ್ಣ ಮಾಹಿತಿಯನ್ನು ಜನವರಿಯಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗುವುದು ಎಂದು ಮೂಲಗಳು ಹೇಳಿವೆ.

ಎರಡು ದಿನಗಳವರೆಗೆ ಸುದ್ದಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಸುಮಾರು 15 ಲಕ್ಷ ಮಕ್ಕಳಲ್ಲಿ 12.5 ಲಕ್ಷಕ್ಕೂ ಹೆಚ್ಚು ಮಕ್ಕಳು ಮೊಟ್ಟೆಗಳ ಪರವಾಗಿ ಮತ ಚಲಾಯಿಸಿದ್ದಾರೆ.

ಕಲ್ಯಾಣ ಕರ್ನಾಟಕ ಮತ್ತು ವಿಜಯಪುರ ಜಿಲ್ಲೆ ಸೇರಿದಂತೆ ಒಟ್ಟು ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕನಿಷ್ಠ ಶೇಕಡಾ 80ರಷ್ಟು ವಿದ್ಯಾರ್ಥಿಗಳು ಮಧ್ಯಾಹ್ನದ ಊಟದಲ್ಲಿ ಬೇಯಿಸಿದ ಮೊಟ್ಟೆಗೆ ಆದ್ಯತೆ ನೀಡಿದ್ದಾರೆ.

 

ನವೆಂಬರ್ 26 ಮತ್ತು 27ರಂದು ಮಧ್ಯಾಹ್ನದ ಊಟದ ಸಮಯದಲ್ಲಿ ಆಹಾರದ ಆಯ್ಕೆಯ ಕುರಿತು ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಲು ಶಾಲಾ ಮುಖ್ಯಸ್ಥರು, ಮುಖ್ಯೋಪಾಧ್ಯಾಯರು ಸಮೀಕ್ಷೆ ನಡೆಸಿದ್ದರು. ಮೊಟ್ಟೆಗಳನ್ನು ಸೇವಿಸುವುದರಿಂದ ಶಾಲಾ ಮಕ್ಕಳ ಬೆಳವಣಿಗೆ ಅಂದರೆ ತೂಕ ಮತ್ತು ಎತ್ತರದ ಸಂಪೂರ್ಣ ಮಾಹಿತಿಯನ್ನು ಜನವರಿಯಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗುವುದು ಎಂದು ಮೂಲಗಳು ಹೇಳಿದೆ.

ಕಳೆದ ಎರಡು ದಿನಗಳವರೆಗೆ ನಡೆದ ಸಮೀಕ್ಷೆಯಲ್ಲಿ ಸುಮಾರು 15 ಲಕ್ಷ ಮಕ್ಕಳಲ್ಲಿ 12.5 ಲಕ್ಷಕ್ಕೂ ಹೆಚ್ಚು ಮಕ್ಕಳು ಮೊಟ್ಟೆಗಳ ಪರವಾಗಿ ಮತ ಚಲಾಯಿಸಿದ್ದಾರೆ. ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಇತ್ತೀಚೆಗೆ ಕಲ್ಯಾಣ ಕರ್ನಾಟಕ ಮತ್ತು ವಿಜಯಪುರ ಜಿಲ್ಲೆಗಳ ಏಳು ಹಿಂದುಳಿದ ಜಿಲ್ಲೆಗಳಲ್ಲಿ ಮಧ್ಯಾಹ್ನದ ಊಟದ ಭಾಗವಾಗಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ಪರಿಚಯಿಸಿತ್ತು. ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳು ಆಡಳಿತಕ್ಕೆ ಬೇಡಿಕೆ ಸಲ್ಲಿಸಿದ ನಂತರ ರಾಜ್ಯವು ಈಗ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಕಾರ್ಯಕ್ರಮವನ್ನು ವಿಸ್ತರಿಸಲು ಯೋಜಿಸುತ್ತಿದೆ.

LEAVE A REPLY

Please enter your comment!
Please enter your name here