ಬಿಸಿಸಿಐನಿಂದ ಕೊರೋನಾ ಹೆಚ್ಚಾಯ್ತು ಎಂದು ಮುಂಬೈ ಕೋಚ್!

Date:

ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಉಳಿದಿರುವ 31 ಪಂದ್ಯಗಳು ಸೆಪ್ಟೆಂಬರ್ ತಿಂಗಳಿನಲ್ಲಿ ಮುಂದುವರಿಯುವ ಸಾಧ್ಯತೆಗಳಿವೆ.

 

ಐಪಿಎಲ್ ಮುಂದೂಡಲ್ಪಟ್ಟ ನಂತರ ಮುಂಬೈ ಇಂಡಿಯನ್ಸ್ ತಂಡದ ಫೀಲ್ಡಿಂಗ್ ಕೋಚ್ ಜೇಮ್ಸ್ ಪಮೆಂಟ್ ಇದೀಗ ನ್ಯೂಜಿಲೆಂಡ್‌ನ್ನು ತಲುಪಿದ್ದು ಐಪಿಎಲ್ ಟೂರ್ನಿಗೂ ಮುನ್ನ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಕುರಿತು ಮಾತನಾಡಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಚೆನ್ನೈ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡದೆ ನಡೆಸಲಾಗಿತ್ತು ಮತ್ತು ಅದೇ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯಕ್ಕೆ ಶೇಕಡಾ ಅರ್ಧದಷ್ಟು ಜನರಿಗೆ ಪಂದ್ಯವನ್ನು ವೀಕ್ಷಿಸುವ ಅವಕಾಶವನ್ನು ನೀಡಲಾಗಿತ್ತು. ಇದೇ ರೀತಿ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಶೇಕಡಾ ಅರ್ಧದಷ್ಟು ಜನರಿಗೆ ಅವಕಾಶವನ್ನು ನೀಡಲಾಗಿತ್ತು.

 

ಈ ಕುರಿತು ಮಾತನಾಡಿದ ಜೇಮ್ಸ್ ಪಮೆಂಟ್ ‘ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಆರಂಭಿಕ ಪಂದ್ಯಗಳನ್ನು ಕ್ರೀಡಾಂಗಣಕ್ಕೆ ವೀಕ್ಷಕರು ಬಾರದಂತೆ ಬಹಳ ಎಚ್ಚರಿಕೆಯಿಂದ ನಡೆಸಲಾಯಿತು ಆದರೆ ಅಹ್ಮದಾಬಾದ್​ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ 70000 ಜನರಿಗೆ ಪಂದ್ಯವನ್ನು ಕ್ರೀಡಾಂಗಣದಲ್ಲಿ ವೀಕ್ಷಿಸುವ ಅವಕಾಶವನ್ನು ನೀಡಲಾಯಿತು. ಇದೀಗ ಅಹ್ಮದಾಬಾದ್​ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದೊಡ್ಡ ಮಟ್ಟದಲ್ಲಿಯೇ ಇದ್ದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ವೀಕ್ಷಿಸಲು ಅಂದು 70,000 ವೀಕ್ಷಕರಿಗೆ ಅವಕಾಶ ನೀಡಿದ್ದು ಕೂಡ ಇದಕ್ಕೆ ಕಾರಣವಿರಬಹುದು, ಅದೊಂದು ಬೇಜವಾಬ್ದಾರಿತನದ ಕೆಲಸವಾಗಿತ್ತು’ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

 

 

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...