ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವುದಕ್ಕೂ ಮುನ್ನ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ತ್ಯಜಿಸುವುದಾಗಿ ಹೇಳಿಕೆ ನೀಡಿದ್ದ ವಿರಾಟ್ ಕೊಹ್ಲಿ ಇದೀಗ ಭಾರತ ಏಕದಿನ ತಂಡದ ನಾಯಕತ್ವವನ್ನು ಕೂಡ ಕಳೆದುಕೊಂಡಿದ್ದಾರೆ. ಹೌದು ಬಿಸಿಸಿಐ ವಿರಾಟ್ ಕೊಹ್ಲಿಯವರನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ವಜಾಗೊಳಿಸಿದ್ದು ರೋಹಿತ್ ಶರ್ಮಾ ಹೆಗಲಿಗೆ ನಾಯಕತ್ವದ ಜವಾಬ್ದಾರಿಯನ್ನು ಹಾಕಿದೆ.
ಹೀಗೆ ಭಾರತ ಏಕದಿನ ತಂಡದ ನಾಯಕತ್ವವನ್ನು ಕಳೆದುಕೊಂಡಿರುವ ವಿರಾಟ್ ಕೊಹ್ಲಿ ಬಿಸಿಸಿಐ ವಿರುದ್ಧ ಮುನಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಹೌದು, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಬಿಸಿಸಿಐ ಏರ್ಪಡಿಸಿರುವ ವಿಮಾನದಲ್ಲಿ ವಿರಾಟ್ ಕೊಹ್ಲಿ ಪ್ರಯಾಣಿಸಲು ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದ್ದು ಬಿಸಿಸಿಐ ಮತ್ತು ವಿರಾಟ್ ಕೊಹ್ಲಿ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಸುದ್ದಿ ಮತ್ತೊಮ್ಮೆ ವೈರಲ್ ಆಗುತ್ತಿದೆ.
ಹೀಗೆ ಬಿಸಿಸಿಐ ಏರ್ಪಡಿಸಿರುವ ವಿಮಾನದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲು ಒಲ್ಲೆ ಎಂದಿರುವ ವಿರಾಟ್ ಕೊಹ್ಲಿ ತಮ್ಮದೇ ಆದ ಖಾಸಗಿ ವಿಮಾನದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಲು ತೀರ್ಮಾನಿಸಿದ್ದಾರೆ ಎಂಬ ಸುದ್ದಿಯೂ ಸಹ ಹರಿದಾಡುತ್ತಿದೆ.