No menu items!
26.3 C
Munich
Thursday, June 18, 2026

ಬಿಹಾರದಲ್ಲಿ ಆರ್‌ಜೆಡಿ -ಜೆಡಿಯು ಮೈತ್ರಿ ಸರ್ಕಾರ ಪತನ !

Must read

ಪಾಟ್ನಾ: ಆರ್‌ಜೆಡಿ-ಜೆಡಿಯು ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದೆ ಹೌದು ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಅವರು ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ.
ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಯ ನಂತರ ನಿತೀಶ್‌, ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿ ಬಿಜೆಪಿ ಜೊತೆ ನಿತೀಶ್ ಕುಮಾರ್ ಸರ್ಕಾರ ರಚನೆ ಬಹುತೇಕ ಫಿಕ್ಸ್ ಆಗಿದ್ದು, ಇಂದು ಸಂಜೆ ಅಥವಾ ಸೋಮವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.

- Advertisement -spot_img

More articles

- Advertisement -spot_img

Latest article