ಬಿ.ಸರೋಜಾದೇವಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು:ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲ್ಲೇಶ್ವರಂನ 11 ನೇ ಅಡ್ಡ ರಸ್ತೆಯಲ್ಲಿರುವ ಬಹುಭಾಷಾ ತಾರೆ ಹಿರಿಯ ನಟಿ ದಿವಂಗತ ಪದ್ಮಭೂಷಣ ಶ್ರೀ ಮತಿ ಬಿ ಸರೋಜ ದೇವಿ ಇವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲಾ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು.ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂ.ಜಿ.ಆರ್, ಎನ್.ಟಿ.ಆರ್, ಶಿವಾಜಿ ಗಣೇಶನ್, ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು ಎಂದರು.