ಬೆಂಗಳೂರು: ಬೆಂಗಳೂರಿನ ಕೋಣನಕುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಸೆಂಚುರಿ ಕಳ್ಳನನ್ನು ಅರೆಸ್ಟ್ ಮಾಡಿದ್ದಾರೆ. ಇಮ್ರಾನ್ ಅಲಿಯಾಸ್ ಚೋರ್ ಇಮ್ರಾನ್ ಬಂಧಿತ ಆರೋಪಿಯಾಗಿದ್ದಾನೆ. ಕರ್ನಾಟಕ ಸೇರಿ ಹಲವಾರು ಹೊರ ರಾಜ್ಯದಲ್ಲಿ ಸುಮಾರು 120ಕ್ಕೂ ಹೆಚ್ಚು ಕಡೆಗಳಲ್ಲಿ ಕಳ್ಳತನ ಮಾಡಿದ್ದ. ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ.
ಸದ್ಯ ಇಮ್ರಾನ್‌ನನ್ನು ಬಂಧಿಸಿ, ಆತ ಬಳಿ ಇದ್ದ 1 ಕೆಜಿ 250 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಕಳವು ಮಾಡಿದ ಆಭರಣಗಳನ್ನು ಮುಂಬೈ, ಹೈದರಾಬಾದ್, ಮೈಸೂರು ಹಾಗೂ ಬೆಂಗಳೂರಿನಲ್ಲಿ ಮಾರಾಟ ಮಾಡಿದ್ದ. ಸದ್ಯ ಚೋರ್ ಇಮ್ರಾನ್ ಬಂಧನದಿಂದ 12 ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 28 ಕಳವು ಪ್ರಕರಣಗಳು ಪತ್ತೆಯಾಗಿದೆ.
ಬೀಗ ಹಾಕಿರುವ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಕಳ್ಳ ಅರೆಸ್ಟ್..!
Date: