ಬೀದರ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳು; ಆಸಕ್ತರು ಅರ್ಜಿ ಹಾಕಿ

0
39

ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಅರ್ಭರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 9 ಕೊನೆಯ ದಿನವಾಗಿದೆ.

 

ಸ್ಟೆನೋಗ್ರಾಫರ್ 12, ಬೆರಳಚ್ಚುಗಾರರು 9 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಾಡ್ಲೂರ್ ಸತ್ಯನಾರಾಯಣಾಚಾರ್ಯ ತಿಳಿಸಿದ್ದಾರೆ.

ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿಗಳನ್ನು ಸಲ್ಲಿಸುವವರು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ದ್ವಿತೀಯ ಪಿಯುಸಿ. ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

 

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಆಂಗ್ಲ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ. ಪ್ರವರ್ಗ 2ಎ/ 2ಬಿ/ 3ಎ/ 3ಬಿಗೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

 

ಶುಲ್ಕದ ವಿವರಗಳು; ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 200 ರೂ. ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಆಸಕ್ತ, ಅರ್ಹ ಅಭ್ಯರ್ಥಿಗಳು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://districts.ecourts.gov.in/bidar-onlinerecruitment ನಲ್ಲಿ ನೀಡಲಾದ ಲಿಂಕ್ ಮೂಲಕ ಅಕ್ಟೋಬರ್ 9ರ ರಾತ್ರಿ 11.59ರ ತನಕ ಅರ್ಜಿ ಸಲ್ಲಿಸಬಹುದು.

 

ಅಭ್ಯರ್ಥಿಗಳು ಅನ್‌ಲೈನ್ ಹೊರತುಪಡಿಸಿ ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಿದರೆ ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಬೀದರ್ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08482-226448.

LEAVE A REPLY

Please enter your comment!
Please enter your name here