ಬುಮ್ರಾ, ಚಹಾಲ್ ಹಿಂದಿಕ್ಕಿದ್ದ ಠಾಕೂರ್!

0
34

2017ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಶಾರ್ದೂಲ್ ಠಾಕೂರ್ ಪ್ರಸ್ತುತ ಭಾರತದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಭಾರತ – ಇಂಗ್ಲೆಂಡ್ ನಡುವಿನ ಟಿ ಟ್ವೆಂಟಿ ಮತ್ತು ಏಕದಿನ ಸರಣಿಯಲ್ಲಿ ಶಾರ್ದೂಲ್ ಠಾಕೂರ್ ಉತ್ತಮ ಬೌಲಿಂಗ್ ಮಾಡಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಇದೀಗ ಶಾರ್ದೂಲ್ ಠಾಕೂರ್ 2020ರಿಂದೀಚೆಗೆ ಸೀಮಿತ ಓವರ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಹೌದು 2020ರಿಂದ ಇಲ್ಲಿಯವರೆಗೂ ಶಾರ್ದೂಲ್ ಠಾಕೂರ್ ಸೀಮಿತ ಓವರ್ ಪಂದ್ಯಗಳಲ್ಲಿ ಪಡೆದಿರುವ ಒಟ್ಟು ವಿಕೆಟ್‍ಗಳ ಸಂಖ್ಯೆ 37. ಇನ್ನುಳಿದಂತೆ ಚಹಾಲ್ 17 ವಿಕೆಟ್‍ಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದರೆ, 14 ವಿಕೆಟ್ ಪಡೆದಿರುವ ಶಮಿ ಮೂರನೇ ಸ್ಥಾನ & 13 ವಿಕೆಟ್ ಪಡೆದಿರುವ ಬುಮ್ರಾ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 2 ವಿಕೆಟ್ ಪಡೆದು ಮಿಂಚಿದರು ಹಾಗೂ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ ಟ್ವೆಂಟಿ ಪಂದ್ಯದಲ್ಲಿ 3 ವಿಕೆಟ್ ಪಡೆದ ಶಾರ್ದೂಲ್ ಠಾಕೂರ್ ಐದನೇ ಟಿ ಟ್ವೆಂಟಿ ಪಂದ್ಯದಲ್ಲಿಯೂ ಸಹ 3 ವಿಕೆಟ್ ಪಡೆದಿದ್ದರು. ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಶಾರ್ದೂಲ್ ಠಾಕೂರ್ ಏಕದಿನ ಸರಣಿಯಲ್ಲಿಯೂ ಸಹ ತಮ್ಮ ಉತ್ತಮ ಆಟವನ್ನು ಮುಂದುವರಿಸಿದರು.

ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದರು ಮತ್ತು ನಾಲ್ಕನೇ ಏಕದಿನ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಡೇವಿಡ್ ಮಲನ್, ಜೋಸ್ ಬಟ್ಲರ್ , ಲಿವಿಂಗ್ ಸ್ಟೋನ್ & ಆದಿಲ್ ರಶೀದ್ ಅವರ ಪ್ರಮುಖ ವಿಕೆಟ್‍ಗಳನ್ನು ಪಡೆದು ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿಯೂ ಸಹ ಶಾರ್ದೂಲ್ ಠಾಕೂರ್ 3 ವಿಕೆಟ್‍ಗಳನ್ನು ಪಡೆದು ಮಿಂಚಿದ್ದರು. ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ 1 ಮತ್ತು ಮೂರನೇ ಪಂದ್ಯದಲ್ಲಿ 1 ವಿಕೆಟ್‍ನ್ನು ಶಾರ್ದೂಲ್ ಪಡೆದಿದ್ದರು.

LEAVE A REPLY

Please enter your comment!
Please enter your name here