ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಕೊನೇ ಕ್ಷಣದಲ್ಲಿದೆ. ಅಕ್ಟೋಬರ್ 15ರಂದು ಫೈನಲ್ ಪಂದ್ಯದೊಂದಿಗೆ ಐಪಿಎಲ್ 2021ರ ಆವೃತ್ತಿ ಕೊನೆಗೊಳ್ಳಲಿದೆ. ಐಪಿಎಲ್ ಮುಗಿಯುತ್ತಲೇ ಟಿ20 ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಐಪಿಎಲ್ ನಡೆಯುತ್ತಿರುವ ಅದೇ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಓಮನ್‌ನಲ್ಲಿ ವಿಶ್ವಕಪ್ ಪ್ರಾರಂಭಗೊಳ್ಳಲಿದೆ. ಪ್ರತಿಷ್ಠಿತ ಟೂರ್ನಿಗಾಗಿ ಟೀಮ್ ಇಂಡಿಯಾ ಸಜ್ಜಾಗಿದೆ.
ಅಕ್ಟೋಬರ್ 17ರಿಂದ ನವೆಂಬರ್ 14ರ ವರೆಗೆ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಭಾರತ ತಂಡ ನೂತನ ಜೆರ್ಸಿ ಬಿಡುಗಡೆ ಮಾಡಿದೆ. ಟೀಮ್ ಇಂಡಿಯಾದ ಕಿಟ್ ಸ್ಪಾನ್ಸರ್ ಮೊಬೈಲ್ ಪ್ರೀಮಿಯರ್ ಲೀಗ್ (ಎಂಪಿಎಲ್) ಮತ್ತು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಜಂಟಿಯಾಗಿ ಭಾರತದ ನೂತನ ಜೆರ್ಸಿಯನ್ನು ಬುಧವಾರ ಬಿಡುಗಡೆ ಮಾಡಿತ್ತು.
ಟಿಮ್ ಇಂಡಿಯಾದ ನೂತನ ಜೆರ್ಸಿ ಬಿಡುಗಡೆಯಾದ ಬೆನ್ನಲ್ಲೇ ದುಬೈಯಲ್ಲಿರುವ ವಿಶ್ವದ ಅತೀ ಎತ್ತರದ ಕಟ್ಟಡವೆಂದು ಗುರುತಿಸಿಕೊಳ್ಳಲಾದ ಬುರ್ಜ್ ಖಲೀಫಾದಲ್ಲಿ ಭಾರತದ ಜೆರ್ಸಿಯ ಚಿತ್ರ ಪ್ರದರ್ಶಿಸಲ್ಪಟ್ಟಿದೆ. ಅಕ್ಟೋಬರ್ 14ರಂದು ಭಾರತದ ನೂತನ ಜೆರ್ಸಿಯ ವಿಡಿಯೋ ಜುರ್ಜ್ ಖಲೀಫಾದಲ್ಲಿ ಪ್ರದರ್ಶನಗೊಂಡಿದೆ.