ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!
ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ ಆಗುತ್ತಿದೆ. ಬೆಂಗಳೂರಿನಲ್ಲಿರುವ ಪಿಹೆಚ್ಸಿ ಸೆಂಟರ್ಗಳು, ರೆಫೆರಲ್ ಆಸ್ಪತ್ರೆಗಳು, ಮಲ್ಟಿ ಸ್ಪೆಷಾಲಿಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು GBA ಮತ್ತು ಆರೋಗ್ಯ ಇಲಾಖೆ ಇವೆರಡೂ ನಿರ್ವಹಿಸುತ್ತಿವೆ. ಆದರೆ ಇವೆರಡೂ ಇಲಾಖೆಗಳಿಗೂ ಆಸ್ಪತ್ರೆಗಳ ಮೇಲೆ ಸಂಪೂರ್ಣ ಹಿಡಿತವಿಲ್ಲ. ಇದರಿಂದಾಗಿ ಆಸ್ಪತ್ರೆಗಳ ಅಭಿವೃದ್ಧಿಗೆ ಕೊರತೆಯಾಗುತ್ತಿದೆ. ಅಷ್ಟೇ ಅಲ್ಲದೆ ಸಮನ್ವಯ ಕೊರತೆಯಿಂದಾಗಿ ಚಿಕಿತ್ಸೆಯೂ ವಿಳಂಬವಾಗುತ್ತಿದೆ.
ಈಗಾಗಲೇ ಜಿಬಿಎ ವ್ಯಾಪ್ತಿಯಲ್ಲಿರುವ ಪಿಹೆಚ್ಸಿ ಸೆಂಟರ್ಗಳು, ರೆಫೆರಲ್ ಆಸ್ಪತ್ರೆಗಳು, ಮಲ್ಟಿ ಸ್ಪೆಷಾಲಿಟಿ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ಹಾಗೂ ಜಿಬಿಎ,ಈ ಎರಡು ಇಲಾಖೆಗಳು ನಿರ್ವಹಣೆ ಮಾಡುತ್ತಿದೆ. ಆದರೆ ಎರಡು ಇಲಾಖೆಗಳಿಗೂ ಸಂಪೂರ್ಣವಾಗಿ ಆಸ್ಪತ್ರೆಗಳ ಮೇಲೆ ಹಿಡಿತ ಇಲ್ಲದಂತಾಗಿದೆ. ಅನುದಾನ, ಮೆಡಿಸನ್, ನಿರ್ವಹಣೆ , ಸಿಬ್ಬಂದಿ ಹಾಗೂ ವೈದ್ಯರ ನೇಮಕಾತಿ ಹೀಗೆ ಅನೇಕ ವಿಚಾರಗಳಲ್ಲಿ ಸಮನ್ವಯತೆಯ ಕೊರತೆ ಇರುವುದು ಎದ್ದು ಕಾಣುತ್ತಿದೆ. ಇದರಿಂದ ಆಸ್ಪತ್ರೆಗಳಲ್ಲಿ ಸರಿಯಾದ ರೀತಿಯ ಅಭಿವೃದ್ಧಿ ಕಾಣುತ್ತಿಲ್ಲ ಎನ್ನಲಾಗಿದೆ.
ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯೂ ಸಿಗುತ್ತಿಲ್ಲ. ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಜಿಬಿಎ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ಪಡೆಯಲು ಮುಂದಾಗಿತ್ತು. ಈ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿ ಹರ್ಷಗುಪ್ತಗೆ ವರದಿ ಸಲ್ಲಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೀಗ ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆಯ ಸುಪರ್ದಿಗೆ ಪಡೆಯುವುದಕ್ಕೆ ಅನೇಕ ಸಮಸ್ಯೆಗಳು ಎದುರಾಗಿವೆ.