No menu items!
21 C
Munich
Monday, August 3, 2026

ಬೆಂಗಳೂರಿಗೆ ಆಗಮನಕ್ಕೂ ಮುನ್ನವೇ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್.!

Must read

ಬೆಂಗಳೂರು: ಕಳೆದ ಒಂದು ತಿಂಗಳಿಂದಲೂ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಪ್ರತಿ ದಿನ ಒಂದಲ್ಲ ಒಂದು ವಿಷಯ ಸದ್ದು ಮಾಡುತ್ತಲೇ ಇದೆ. ಇದರ ಬೆನ್ನಲ್ಲೇ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ಪರ ವಕೀಲ ಅರುಣ್ ಅವರು ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದರು. ಈ ಮೂಲಕ ಎಫ್‍ಐಆರ್ ದಾಖಲಾದ ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಸಿಐಡಿ ಕ್ರೈಂ ನಂ 20ರಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಮೂರು ಅತ್ಯಾಚಾರ ಪ್ರಕರಣಕ್ಕೂ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಜೆ ಪ್ರಜ್ವಲ್ ಪರ ವಕೀಲರು ಮಧ್ಯಂತರ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಮುಂದೆ ಮನವಿ ಮಾಡುವ ಸಾಧ್ಯತೆಗಳಿವೆ. ಸೋಮವಾರ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ ಕುಟುಂಬ ಜಾಗೂ ರಾಜ್ಯದ ಜನತೆಯ ಮುಂದೆ ಕ್ಷಮೆಯಾಚಿಸಿದ್ದರು. ಅಲ್ಲದೇ ಶುಕ್ರವಾರ ಎಸ್‍ಐಟಿ ಮುಂದೆ ಹಾಜರಾಗುವುದಾಗಿ ತಿಳಿಸಿದ್ದರು.

- Advertisement -spot_img

More articles

- Advertisement -spot_img

Latest article