ಬೆಂಗಳೂರಿಗೆ ಉಪರಾಷ್ಟ್ರಪತಿ ಆಗಮನ: ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

Date:

ಬೆಂಗಳೂರು: ಬೆಂಗಳೂರಿನಲ್ಲಿ ಎನ್ಎಎಲ್ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಭಾಗಿ ಆಗಲಿದ್ದು, ಆದ್ದರಿಂದ ಹಲವು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಿ ಆದೇಶ ಹೊರಡಿಸ ಲಾಗಿದೆ. ಹೌದುನಗರಕ್ಕೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಆಗಮಿಸುತ್ತಿದ್ದು ಹಲವು ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಅದೇ ರೀತಿ ವಾಹನ ಸವಾರರು ಪರ್ಯಾಯ ರಸ್ತೆ ಮಾರ್ಗಗಳನ್ನು ಬಳಸುವಂತೆಯೂ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
ಇನ್‌ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಎಂ.ಜಿ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ ಹಾಗೂ ವಿಂಡ್ ಟನಲ್ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಲಾಗಿದೆ. ಬೆಳಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಈ ಬದಲಾವಣೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ. ಎನ್ಎಎಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಉಪರಾಷ್ಟ್ರಪತಿ ಧನಕರ್ ನಂತರ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

ಲಂಕಾ ನೆಲದಲ್ಲಿ ಕ್ರಿಕೇಟ್ ಕ"ಲಾ"ರವ ! "ಲಾಯರ್" ಗಳ ಬಗ್ಗೆ ನಿಮಗೆಲ್ಲ ಗೊತ್ತೆ...

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್: ಡಿ.ಕೆ. ಶಿವಕುಮಾರ್

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್:...

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ ಚಿಕ್ಕಮಗಳೂರು:...

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...