No menu items!
18 C
Munich
Thursday, June 18, 2026

ಬೆಂಗಳೂರಿಗೆ ಬಂದಿಳಿದ ಮೋದಿಗೆ ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತ!

Must read

ಬೆಂಗಳೂರಿಗೆ ಬಂದಿಳಿದ ಮೋದಿಗೆ ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತ!

ಬೆಂಗಳೂರು: ಕರ್ನಾಟಕ ಸರ್ಕಾರ, ವಸತಿ ಮತ್ತು ಕೇಂದ್ರ ನಗರ ವ್ಯವಹಾರಗಳ ಸಚಿವಾಲಯ, ಕೇಂದ್ರ ರೈಲ್ವೆ ಮಂಡಳಿ ಹಾಗೂ ರೈಲ್ವೇ ಸಚಿವಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ಪ್ರಧಾನ ಮಂತ್ರಿಗಳನ್ನು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಆತ್ಮೀಯವಾಗಿ ಸ್ವಾಗತಿಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -spot_img

More articles

- Advertisement -spot_img

Latest article